ಕರ್ನಾಟಕಪ್ರಮುಖ ಸುದ್ದಿ

ನಾಳೆಯಿಂದ ನಂದಿಗಿರಿಧಾಮ ವೀಕ್ಷಣೆಗೆ ಮುಕ್ತ

ರಾಜ್ಯ(ಚಿಕ್ಕಬಳ್ಳಾಪುರ),ನ.30 :- ಪ್ರಕೃತಿ ಪ್ರಿಯರಿಗೆ ಗುಡ್ ನ್ಯೂಸ್ ಇದೆ. ನಾಳೆಯಿಂದ (ಡಿ.1) ಜಗತ್ಪ್ರಸಿದ್ಧ ನಂದಿಗಿರಿಧಾಮ ಪ್ರವೇಶಕ್ಕೆ ಪ್ರವಾಸಿಗರಿಗೆ ಅವಕಾಶ ಕಲ್ಪಿ ಸಲಾಗಿದೆ.
ಕಳೆದ ಆಗಸ್ಟ್ ತಿಂಗಳಲ್ಲಿ ವ್ಯಾಪಕ ಮಳೆಯಿಂದಾಗಿ ನಂದಿಗಿರಿಧಾಮದ ರಸ್ತೆ ಕುಸಿದಿದ್ದರಿಂದ ಸಾರ್ವಜನಿಕರು ಮತ್ತು ವಾಹನಗಳ ಸಂಚಾರಕ್ಕೆ ತೊಂದರೆಯಾಗಿತ್ತು. ರಸ್ತೆ ದುರಸ್ತಿ ಹಿನ್ನಲೆ ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ ಹೇರಲಾಗಿತ್ತು. ಈಗ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಡಿ.1 ರಿಂದ ಜನರ ಪ್ರವೇಶಕ್ಕೆ ಮುಕ್ತವಾಗಲಿದೆ. ಆದರೆ, ವಾರಾಂತ್ಯದ ಶನಿವಾರ ಮತ್ತು ಭಾನುವಾರ ನಂದಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಗಿರಿಧಾಮದ ಹೋಟೆಲ್ ಮತ್ತು ವಸತಿ ಗೃಹಗಳಲ್ಲಿ ಮುಂಗಡವಾಗಿ ಕೊಠಡಿಗಳನ್ನು ಕಾಯ್ದಿರಿಸಿದವರಿಗೆ ಮಾತ್ರ ವಾರಾಂತ್ಯದ ದಿನಗಳಂದು ಪ್ರವೇಶವಿರುತ್ತದೆ. ಜತೆಗೆ ಕೊರೊನಾ ಮಾರ್ಗಸೂಚಿಯನ್ನು ಪ್ರತಿಯೊಬ್ಬರು ಕಡ್ಡಾಯವಾಗಿ ಪಾಲಿಸಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ.ತಿಳಿಸಿದ್ದಾರೆ. (ಎಸ್.ಎಂಎಸ್.ಎಚ್)

Leave a Reply

comments

Related Articles

error: