ಕರ್ನಾಟಕಪ್ರಮುಖ ಸುದ್ದಿ

ಡಿ.01 ರಂದು ವಿಶ್ವ ಏಡ್ಸ್ ದಿನ

ರಾಜ್ಯ(ಮಡಿಕೇರಿ) ಡಿ.1:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಕೊಡಗು, ಮಡಿಕೇರಿ ಲಯನ್ಸ್ ಸಂಸ್ಥೆ, ರೋಟರಿ ಸಂಸ್ಥೆ, ಸರ್ಕಾರಿ ಪದವಿಪೂರ್ವ ಕಾಲೇಜು, ಎಫ್‍ಎಂಕೆಎಂಸಿ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು, ಓಡಿಪಿ-ಸ್ನೇಹಾಶ್ರಯ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್, 01 ರಂದು ಬೆಳಗ್ಗೆ 11 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಸಮಾನತೆ ಕೊನೆಗೊಳಿಸಿ, ಏಡ್ಸ್ ಕೊನೆಗೊಳಿಸಿ ಹಾಗೂ ಸಾಂಕ್ರಮಿಕ ರೋಗ ಕೊನೆಗೊಳಿಸಿ ಎಂಬ ಘೋಷಣೆಯೊಂದಿಗೆ ವಿಶ್ವ ಏಡ್ಸ್ ದಿನ-2021 ರ ಸಭಾ ಕಾರ್ಯಕ್ರಮ ನಡೆಯಲಿದೆ.
ಸಭಾ ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ 9.30 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಾಥಾ ಕಾರ್ಯಕ್ರಮ ನಡೆಯಲಿದೆ. ಜಾಥಾವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಲ್.ಜಿನರಾಳಕರ್ ಅವರು ಉದ್ಘಾಟಿಸಲಿದ್ದಾರೆ.
ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಲ್.ಜಿನರಾಳಕರ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಸುಬ್ರಮಣ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಭೋಧಕ ಆಸ್ಪತ್ರೆಯ ಡೀನ್ ಹಾಗೂ ನಿರ್ದೇಶಕರಾದ ಡಾ.ಕೆ.ಬಿ.ಕಾರ್ಯಪ್ಪ, ಮಡಿಕೇರಿ ರೋಟರಿ ಸಂಸ್ಥೆಯ ಅಧ್ಯಕ್ಷರಾದ ಎನ್.ಡಿ.ಅಚ್ಚಯ್ಯ, ಲಯನ್ಸ್ ಸಂಸ್ಥೆಯ ಅಧ್ಯಕ್ಷರಾದ ನಟರಾಜು ಕೆಸ್ತೂರು, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ, ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಎಸ್.ಗೋಪಿನಾಥ್, ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಪಿ.ಆರ್.ವಿಜಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ಕೆ.ಸಿ.ದಯಾನಂದ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎನ್.ಆನಂದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ಇತರರು ಪಾಲ್ಗೊಳ್ಳಲಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: