ಕರ್ನಾಟಕಪ್ರಮುಖ ಸುದ್ದಿ

ಕೊಡಗು ಜಿಲ್ಲೆಯಲ್ಲಿ ಬುಧವಾರ 10 ಹೊಸ ಕೋವಿಡ್-19 ಪ್ರಕರಣ

ರಾಜ್ಯ(ಮಡಿಕೇರಿ) ಡಿ.2:-ಜಿಲ್ಲೆಯಲ್ಲಿ ಬುಧವಾರ 10 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 09 ಪ್ರಕರಣ ಆರ್‍ಟಿಪಿಸಿಆರ್ ಮತ್ತು 01 ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲ್ಲೂಕಿನಲ್ಲಿ 05, ವಿರಾಜಪೇಟೆ ತಾಲೂಕಿನಲ್ಲಿ 01 ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ 04 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 35,455 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 05 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 34,960 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು 432 ಮರಣ ಪ್ರಕರಣಗಳು ವರದಿಯಾಗಿದೆ. 63 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ, ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 16 ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.0.39 ಆಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: