ಮೈಸೂರು

ಕೆ ಎಚ್ ಬಿ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಮೈಸೂರು, ಡಿ.1:- ಕೆ ಎಚ್ ಬಿ ಸ್ಪೋರ್ಟ್ಸ್ ಅಸೋಸಿಯೇಷನ್ (ರಿ) ಹೂಟಗಳ್ಳಿ ಇದರ ವತಿಯಿಂದ 65ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನವೆಂಬರ್ 1 ರಂದು ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಪ್ 2021 ಕ್ರಿಕೆಟ್ ಪಂದ್ಯಾಟದ ಬಹುಮಾನ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕನ್ನಡ ರಾಜ್ಯೋತ್ಸವದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಜಿ.ಪಂ.ಸದಸ್ಯರಾದ ಚಂದ್ರಿಕಾ ಸುರೇಶ್ ಇವರು ದೀಪವನ್ನು ಬೆಳಗಿಸುವುದರ ಜೊತೆಗೆ ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆಯನ್ನು ಮಾಡಿ ಕ್ರಿಕೆಟ್ ಪಂದ್ಯಾಟದ ವಿಜೇತರಿಗೆ ಬಹುಮಾನ ವಿತರಣೆಯನ್ನು ಮಾಡಿದರು.
ಬಳಿಕ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಕೆ ಎಚ್ ಬಿ ಸ್ಫೋರ್ಟ್ಸ್ ಅಸೋಸಿಯೇಶನ್ (ರಿ) ಹೂಟಗಳ್ಳಿ ಇದಕ್ಕೆ ಕ್ರೀಡಾಂಗಣವನ್ನು ಒದಗಿಸಿಕೊಡುವಲ್ಲಿ ಪ್ರಯತ್ನವನ್ನ ಮಾಡುವುದಾಗಿ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾಗಿರುವ ಜಿ.ಟಿ ದೇವೇಗೌಡರ ಗಮನಕ್ಕೆ ಈ ವಿಚಾರವನ್ನು ತಿಳಿಸುತ್ತೇನೆ ಎಂದು ತಿಳಿಸಿದರು.
ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ರಾಕೇಶ್ ರೈ ಎ ಕ್ರೀಡಾಂಗಣವನ್ನು ಒದಗಿಸಿಕೊಡುವಂತೆ ಮನವಿಯನ್ನು ಮಾಡಿಕೊಂಡರು.
ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ರಾಕೇಶ್ ರೈ ಎ ಕಾರ್ಯದರ್ಶಿ ಗಳಾದ ಯಶವಂತ ಕುಮಾರ್ ಉಪಾಧ್ಯಕ್ಷರಾದ ಮನು ಎಂ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: