ಕರ್ನಾಟಕಪ್ರಮುಖ ಸುದ್ದಿಮೈಸೂರು

ಮಂಡ್ಯದಲ್ಲಿ ತ್ರಿಕೋನ ಸ್ಪರ್ಧೆ ಇದ್ದರೂ ಬಿಜೆಪಿ ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಹೆಚ್ಚಿದೆ : ಬಿ.ವೈ.ವಿಜಯೇಂದ್ರ  ವಿಶ್ವಾಸ

ಮೈಸೂರು,ಡಿ.2 :-  ಮಂಡ್ಯದಲ್ಲಿ ಈ ವಿಧಾನ ಪರಿಷತ್ ಚುನಾವಣೆಯಲ್ಲಿ ಒಂದು ರೀತಿಯ ತ್ರಿಕೋನ ಸ್ಪರ್ಧೆ ಇದ್ದರೂ ನಮ್ಮ ಪಕ್ಷದ ಅಭ್ಯರ್ಥಿ ಬೂಕಳ್ಳಿ ಮಂಜು ಅವರು ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಿನ್ನೆ ರಾತ್ರಿ ಮೈಸೂರಿನಲ್ಲಿ ಮಾತನಾಡಿದ ಅವರು ನಿನ್ನೆ ನಾನು ,ಉಸ್ತುವಾರಿ ಸಚಿವ ಸೋಮಶೇಖರ್ ಮತ್ತು ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಅವರು ಸೇರಿ ಚಾಮರಾಜನಗರ ಮತ್ತು ನಂಜನಗೂಡು ಭಾಗದಲ್ಲಿ   ಬಿಜೆಪಿ ಪಕ್ಷದ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದೇವೆ,  ನಾವು ಪ್ರಚಾರಕ್ಕೆ ಹೋದ ಎಲ್ಲ ಕ್ಷೇತ್ರಗಳಲ್ಲೂ ಕೂಡ ಬಿಜೆಪಿಯ ಪರವಾದ ಒಂದು ವಾತವಾರಣ ಕಾಣುತ್ತಿದೆ. ಅದರಲ್ಲೂ ಮೈಸೂರು ಮತ್ತು ಚಾಮರಾಜನಗರ ಭಾಗಗಳ ಕ್ಷೇತ್ರದಲ್ಲಿ  ಬಿಜೆಪಿಗೆ ಗೆಲುವು ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಮಂಡ್ಯದಲ್ಲಿ ಈ ವಿಧಾನ ಪರಿಷತ್ ಚುನಾವಣೆಯಲ್ಲಿ ಒಂದು ರೀತಿಯ ತ್ರಿಕೋನ ಸ್ಪರ್ಧೆ ಇದ್ದರೂ ನಮ್ಮ ಪಕ್ಷದ ಅಭ್ಯರ್ಥಿ ಬೂಕಳ್ಳಿ ಮಂಜು ಅವರು ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದ್ದಾರೆ. ಅಲ್ಲದೆ ಡಿ.5 ರಂದು ಮಾಜಿ ಮುಖ್ಯಮಂತ್ರಿ ಬಿ,ಎಸ್. ಯಡಿಯೂರಪ್ಪ ನವರು ಮಂಡ್ಯ ಮತ್ತು ಚಾಮರಾಜನಗರ ಭಾಗಗಳಿಗೆ ಚುನಾವಣಾ ಪ್ರಚಾರಕ್ಕೆ ಬರಲಿದ್ದಾರೆ ಎಂದು ಮಾಹಿತಿಯನ್ನು ಸಹ ನೀಡಿದ್ದಾರೆ.

ಮೈಸೂರಿನಲ್ಲಿ ಜಿ.ಟಿ.ದೇವೇಗೌಡರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಮತಯಾಚಿಸುತ್ತಿರುವುದರ ಕುರಿತು ಪ್ರತಿಕ್ರಿಯಿಸಿ, ಬೇರೆ ಪಕ್ಷದ ರಾಜಕೀಯ ನಾಯಕರುಗಳ ಮೇಲೆ ಬಿಜೆಪಿ ಪಕ್ಷ ಅವಲಂಬಿಸಿಲ್ಲ , ಬಿಜೆಪಿ ಏನಿದ್ದರೂ ನಮ್ಮ ಪಕ್ಷದ ಸಂಘಟನೆ, ನಮ್ಮ ಶಕ್ತಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆ  ಆಧಾರಿತವಾಗಿ ಚುನಾವಣೆಯನ್ನು ಎದುರಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಪಕ್ಷದ ಶಾಸಕನ ಮೇಲೆ ಹತ್ಯೆ ಮಾಡಲು ಸಂಚು ನಡೆಸಿದ್ದು, ಅದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮರ್ಥನೆ ಮಾಡಿಕೊಳ್ಳುತ್ತಿರುವುದರ ಕುರಿತು ಪ್ರತಿಕ್ರಿಯಿಸಿ,  ಕಾಂಗ್ರೆಸ್ ಪಕ್ಷದ ನಾಯಕರು ಇದನ್ನು ಸಮರ್ಥಿಸಿಕೊಳ್ಳತ್ತಾರೆ ಅಂದರೆ ಅವರ ಹಿನ್ನಲೆಯನ್ನು ಸಹ ನಾವು ನೋಡಬೇಕಾಗುತ್ತದೆ, ನಮ್ಮ ರಾಜ್ಯದಲ್ಲೂ ಕೊಲೆ ಮಾಡಿಸುವ ಹಂತಕ್ಕೂ ಇಳಿಯುತ್ತಾರೆ ಅಂದರೆ ಇದೇ ಮೊದಲು ಕರ್ನಾಟಕದಲ್ಲಿ ಈ ರೀತಿಯ ರಾಜಕಾರಣವನ್ನು ನೋಡುತ್ತಿದ್ದೇವೆ ಎಂದು ಬೇಸರವನ್ನು ವ್ಯಕ್ತಪಡಿಸಿದ್ದಾರೆ. (ಎಸ್.ಎಂ,ಎಸ್.ಎಚ್)

Leave a Reply

comments

Related Articles

error: