ಮೈಸೂರು

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಟ್ಟಡ -ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಪ್ರತಿಭಟನೆ

ಮೈಸೂರು,ಡಿ.2:- ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರು ದೇಶವ್ಯಾಪಿ ಮುಷ್ಕರ ಹಮ್ಮಿಕೊಂಡಿದ್ದು, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ಪ್ರತಿಭಟನೆ ನಡೆಯಿತು.

ಜಿಲ್ಲಾಧಿಕಾರಿಗಳ ಕಛೇರಿ ಎದುರು ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ನಿರಂತರವಾಗಿ ಏರುತ್ತಿರುವ ಕಟ್ಟಡ ಸಾಮಾಗ್ರಿಗಳ ಬೆಲೆಯನ್ನು ನಿಯಂತ್ರಿಸಬೇಕು. ಕಟ್ಟಡ ಸಾಮಾಗ್ರಿಗಳ ಮೇಲೆ ವಿಧಿಸಲಾಗುತ್ತಿರುವ ಜಿ.ಎಸ್.ಟಿ.ಕಡಿತಗೊಳಿಸಬೇಕು. ನೋಂದಣಿಯಾದ ಕಟ್ಟಡ ಕಾರ್ಮಿಕರಿಗೆ ಕಾಮಗಾರಿಗಳಲ್ಲಿ ಪ್ರಥಮ ಆದ್ಯತೆ ನೀಡಬೇಕು. ಕಟ್ಟಡ ಕಾರ್ಮಿಕರಿಗೆ ಭಾನುವಾರ ರಜೆ ಘೋಷಣೆ ಜಾರಿಯಾಗಬೇಕು. ವಿಜಯನಗರ ಜಿಲ್ಲಾ ಕಾರ್ಮಿಕ ಇಲಾಖೆಯಲ್ಲಿ ಜೇಷ್ಠತೆ ಪರಿಪಾಲನೆ ಮಾಡದೇ ಇರುವ ಅಧಿಕಾರಿಗಳ ವಿರುದ್ಧ ಕ್ರಮವಹಿಸಬೇಕು. ಪ್ರತಿತಾಲೂಕಿಗೂ ಕಾರ್ಮಿಕ ನಿರೀಕ್ಷಕರನ್ನು ನೇಮಕ ಮಾಡಬೇಕು. ವಿಜಯನಗರ ಜಿಲ್ಲಾ ಕಾರ್ಮಿಕ ಇಲಾಖೆಯಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದ್ದು ಕೂಡಲೇ ನಿಯಂತ್ರಿಸಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಕಟ್ಟಡ ಕಾರ್ಮಿಕರ ಸಂಘಟನೆಗಳ ಮುಖಂಡರ ಸಭೆ ಕರೆಯಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಅಧ್ಯಕ್ಷ ವಿ.ಸೋಮಶಂಕರ್, ಪ್ರಧಾನ ಕಾರ್ಯದರ್ಶಿ ಹೆಚ್.ಎಂ.ಬಸವಯ್ಯ, ಖಜಾಂಚಿ ಎಂ.ಮಂಜುನಾಥ್, ಪಿರಿಯಾಪಟ್ಟಣದ ಟಿ.ಎಸ್.ಗೋವಿಂದೇಗೌಡ, ನರಸೀಪುರದ ಸಿ.ಬಿ.ನವೀನ್ ಕುಮಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: