ಕರ್ನಾಟಕಪ್ರಮುಖ ಸುದ್ದಿ

ಲಸಿಕೆ ವಿತರಣೆಯಲ್ಲಿ ಶ್ರಮಿಸುತ್ತಿರುವ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದ ಡಾ.ಕೆ.ಸುಧಾಕರ್

ರಾಜ್ಯ(ಬೆಂಗಳೂರು),ಡಿ.2 :-  ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಹೆಚ್ಚುತ್ತಿದ್ದು, ಲಸಿಕೆ ವಿತರಣೆಯಲ್ಲಿ ಶ್ರಮಿಸುತ್ತಿರುವ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ನಿನ್ನೆ ನಮ್ಮ ರಾಜ್ಯದಲ್ಲಿ ಕೋವಿಡ್ ಲಸಿಕೆ ಪಡೆದವರ ಪ್ರಮಾಣ ಹೆಚ್ಚಿದೆ, ಒಂದೇ ದಿನದಲ್ಲಿ 9 ಲಕ್ಷ ಜನರು ಲಸಿಕೆಯನ್ನು ಪಡೆದಿದ್ದಾರೆ. ರಾಜ್ಯದಲ್ಲಿ ಶೇಕಡ 62% ಅಷ್ಟು 2 ನೇ ಡೋಸ್ ಲಸಿಕೆ ಪಡೆದಿದ್ದಾರೆ. 90% ರಷ್ಟು ಮೊದಲ ಡೋಸ್ ಲಸಿಕೆ  ಪಡೆದಿದ್ದಾರೆ . ನಿನ್ನೆಯ ವರೆಗೆ ನಮ್ಮ ರಾಜ್ಯದಲ್ಲಿ 7 ಕೋಟಿ ಲಸಿಕೆಯನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿ ಲಸಿಕೆ ವಿತರಣೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲ ಆರೋಗ್ಯ ಸಿಬ್ಬಂದಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ .

ಮುಂದುವರಿದ ದೇಶಗಳಲ್ಲಿ ಲಸಿಕೆಯನ್ನು ಪಡೆಯಲು ಹಿಂದೆಟ್ಟು ಹಾಕುತ್ತಿರುವ ಸಂರ್ಭದಲ್ಲಿ ನಮ್ಮ ರಾಜ್ಯದಲ್ಲಿ ಅತೀ ಹೆಚ್ಚು ಪ್ರಮಾಣದಲ್ಲಿ ಸಾರ್ವಜನಿಕರು ಲಸಿಕೆಯನ್ನು ಪಡೆದಿದ್ದಾರೆ,   ಯಾರು ಲಸಿಕೆಯನ್ನು ಹಾಕಿಸಿಕೊಂಡಿಲ್ಲ ಅವರಿಗೆ ಲಸಿಕೆಯನ್ನು ಪಡೆಯಲು ಮನವಿಯನ್ನು ಸಹ ಮಾಡಿದ್ದಾರೆ.

ವಿಮಾನ ನಿಲ್ದಾಣಕ್ಕೆ ನಿನ್ನೆ ರಾತ್ರಿಯೂ ನಾನು ಹೋಗಿದ್ದೆ . ಅಲ್ಲಿ ನಡೆಯುತ್ತಿರುವ ಪರೀಕ್ಷೆಗಳನ್ನು ಸಹ ಪರಿಶೀಲನೆ ಮಾಡಿದ್ದೇನೆ. ಇಂದು ಸಹ ನಾನು ಅಲ್ಲಿಗೆ ಹೋಗುವವನಿದ್ದೇನೆ, ಅಲ್ಲದೆ ವಿಮಾನ ನಿಲ್ದಾಣದಲ್ಲಿ ಪರೀಕ್ಷೆ ಮಾಡಿಸಲು ತಗಲುವ  ವೆಚ್ಚೆವನ್ನು  ಕೇಂದ್ರ ಸರ್ಕಾರವೇ ನಿಗದಿ ಮಾಡಿದೆ ಅದರಲ್ಲಿ ನಮ್ಮ ರಾಜ್ಯ ಸರ್ಕಾರ ಯಾವುದೇ ರೀತಿಯ ಹಣವನ್ನು ಪಡೆಯುತ್ತಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. (ಎಸ್.ಎಂ,ಎಸ್.ಎಚ್)

Leave a Reply

comments

Related Articles

error: