ಕರ್ನಾಟಕಪ್ರಮುಖ ಸುದ್ದಿಮನರಂಜನೆ

ತಲೆಗೆ ಗಾಯ : ಹಿರಿಯ ನಟ ಶಿವರಾಂ ಸ್ಥಿತಿ ಗಂಭೀರ

ರಾಜ್ಯ(ಬೆಂಗಳೂರು),ಡಿ.2:-   ಚಂದನವನದ ಹಿರಿಯ ನಟ ಶಿವರಾಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರು ಅಪಘಾತದಲ್ಲಿ ಗಾಯಗೊಂಡಿದ್ದು ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ಹೊಸಕೆರೆ ಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಕಾರ್ ಆಕ್ಸಿಡೆಂಟ್ ಆಗಿತ್ತು. ನಂತರ ಮೂರು ದಿನಗಳಿಂದ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಮೊನ್ನೆ ರಾತ್ರಿ ಮನೆಯಲ್ಲಿ ಅಯ್ಯಪ್ಪನ ಪೂಜೆ ಮಾಡಲು ರೂಂಗೆ ಹೋಗಿದ್ದರು. ರೂಂನಲ್ಲಿ ಬಿದ್ದ ಹಿನ್ನಲೆಯಲ್ಲಿ ತಲೆಗೆ ಬಲವಾದ ಪೆಟ್ಟು ಬಿದ್ದಿದೆ.  ಸ್ಕ್ಯಾನಿಂಗ್ ರಿಪೋರ್ಟ್ ನಲ್ಲಿ ಮೆದುಳಿನಲ್ಲಿ ರಕ್ತಸ್ರಾವ ಆಗಿರುವುದುದು ಗೊತ್ತಾಗಿದೆ . ವೈದರು ಸರ್ಜರಿ ಮಾಡಬೇಕು ಎಂದು ಹೇಳಿದ್ದಾರೆ. ಆದರೆ ನಮ್ಮ ತಂದೆಗೆ ವಯಸ್ಸಾದ ಹಿನ್ನೆಲೆಯಲ್ಲಿ  ಸರ್ಜರಿ ಮಾಡಲು ಆಗಿಲ್ಲ. ಸದ್ಯ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿದಿದೆ ಎಂದು ಅವರ ಮಗ ರವಿಶಂಕರ್ ತಿಳಿಸಿದ್ದಾರೆ. (ಎಸ್.ಎಂ,ಎಸ್.ಎಚ್)

Leave a Reply

comments

Related Articles

error: