
ಪ್ರಮುಖ ಸುದ್ದಿಮೈಸೂರು
ಹಾಡಿ ನಿವಾಸಿ ಮೇಲೆ ಗುಂಡು : ನಟ ಚೇತನ್ ಖಂಡನೆ
ಮೈಸೂರು, ಡಿ.3:- ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ರಾಣಿ ಗೇಟು ಜೇನು ಕುರುಬರ ಹಾಡಿ ನಿವಾಸಿ ಬಸವ ಎಂಬವನ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ ಆರೋಪ ಪ್ರಕರಣ ಸಂಬಂಧ ಘಟನೆಯನ್ನ ನಟ ಚೇತನ್ ಖಂಡಿಸಿದ್ದಾರೆ.
ಮಾಧ್ಯಮ ಗಳೊಂದಿಗೆ ಮಾತನಾಡಿದ ನಟ ಚೇತನ್, ಆದಿವಾಸಿಗಳು ಅರಣ್ಯದ ಮೂಲ ನಿವಾಸಿಗಳು.ಅವರ ಸಂಸ್ಕೃತಿ ಪರಂಪರೆಯನ್ನು ರಕ್ಷಿಸಬೇಕಾಗಿದೆ. ಆದರೆ ಅವರ ಮೇಲೆ ನಿರಂತರ ಶೋಷಣೆ ನಡೆಯುತ್ತಿರುವುದು ಸರಿಯಲ್ಲ. ಆದಿವಾಸಿ ಸಮುದಾಯದ ವ್ಯಕ್ತಿಯ ಮೇಲೆ ಗುಂಡು ಹಾರಿಸಿರುವುದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.
ಅರಣ್ಯದ ಮೂಲ ನಿವಾಸಿಗಳಿಗೆ ಸೂಕ್ತ ರಕ್ಷಣೆ ನೀಡಿ ಅವರ ಹಕ್ಕುಗಳನ್ನು ರಕ್ಷಣೆ ಮಾಡುವುದು ಸರ್ಕಾರದ ಆದ್ಯ ಕರ್ತವ್ಯ ಆಗಿದೆ. ಆದಿವಾಸಿಗಳ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ನಿಲ್ಲಬೇಕು. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಈ ಮೂರು ಪಕ್ಷಗಳು ಆದಿವಾಸಿಗಳನ್ನು ಕಡೆಗಣಿಸುತ್ತಾ ಬಂದಿವೆ ಎಂದು ನಟ ಚೇತನ್ ವಾಗ್ದಾಳಿ ನಡೆಸಿದರು. (ಕೆ.ಎಸ್,ಎಸ್.ಎಚ್)