ಕ್ರೀಡೆದೇಶಪ್ರಮುಖ ಸುದ್ದಿ

ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಫೈನಲ್‌ ನಲ್ಲಿ ಪಿ.ವಿ.ಸಿಂಧುಗೆ ಬೆಳ್ಳಿ

ದೇಶ(ನವದೆಹಲಿ),ಡಿ.6:- ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಭಾರತದ ಸ್ಟಾರ್ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಫೈನಲ್ ನಲ್ಲಿ ಸೋಲನುಭವಿಸಿದ್ದು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.
ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಫೈನಲ್‌ ನಲ್ಲಿ ಸಿಂಧು ದಕ್ಷಿಣ ಕೊರಿಯಾದ ಆನ್ ಸೆಯೊಂಗ್ ವಿರುದ್ಧ 21-16, 21-12 ಸೆಟ್‌ ಗಳಿಂದ ಸೋತರು. ಟೋಕಿಯೊ ಒಲಿಂಪಿಕ್ಸ್-2020ರಲ್ಲಿ ಸಿಂಧು ಕಂಚಿನ ಪದಕ ಗೆದ್ದಿದ್ದರು. ಆದರೆ ಅಂದಿನಿಂದ ಅವರಿಗೆ ಯಾವುದೇ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ.

ಸೆಯಾಂಗ್ ಈ ಹಿಂದೆ ಇಂಡೋನೇಷ್ಯಾ ಮಾಸ್ಟರ್ಸ್ ಮತ್ತು ಇಂಡೋನೇಷ್ಯಾ ಓಪನ್ ಪ್ರಶಸ್ತಿಗಳನ್ನು ಗೆದ್ದಿದ್ದರು. ಅವರು ಅಕ್ಟೋಬರ್‌ ನಲ್ಲಿ ನಡೆದ ಡೆನ್ಮಾರ್ಕ್ ಓಪನ್‌ ನ ಕ್ವಾರ್ಟರ್ ಫೈನಲ್‌ ನಲ್ಲಿ ಸಿಂಧು ಅವರನ್ನು ಸೋಲಿಸಿದ್ದರು. ಸಿಂಧು ಈ ಟೂರ್ನಿಯಲ್ಲಿ ಮೂರನೇ ಬಾರಿ ಫೈನಲ್‌ ಪ್ರವೇಶಿಸಿದ್ದರು. ಅವರು 2018 ರಲ್ಲಿ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯರಾಗಿದ್ದಾರೆ. (ಏಜೆನ್ಸಿಸ್, ಎಸ್.ಎಚ್)

 

Leave a Reply

comments

Related Articles

error: