ಕರ್ನಾಟಕಪ್ರಮುಖ ಸುದ್ದಿಮನರಂಜನೆ

ಸಕಲ ಸರ್ಕಾರಿ ಗೌರವ ಗಳೊಂದಿಗೆ ನೆರವೇರಿದ ಹಿರಿಯನಟ ಶಿವರಾಂ ಅಂತ್ಯಕ್ರಿಯೆ

ಬೆಂಗಳೂರು,ಡಿ.5:- ರಾಷ್ಟ್ರಪ್ರಶಸ್ತಿ ಪುರಸ್ಕೃತ ಕನ್ನಡ ಚಿತ್ರರಂಗದ ಹಿರಿಯ ನಟ ಎಸ್.ಶಿವರಾಂ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಬನಶಂಕರಿಯ ಚಿತಾಗಾರದಲ್ಲಿ ನೆರವೇರಿತು.ಕುಶಾಲತೋಪು ಹಾರಿಸಿ ಪೊಲೀಸರು ಗೌರವ ಸಲ್ಲಿಸಿದರು. ಸರಕಾರದ ಪರವಾಗಿ ಸಚಿವ ಆರ್ ಅಶೋಕ್ ಉಪಸ್ಥಿತರಿದ್ದರು.

ಗುರುಸ್ವಾಮಿಯಾಗಿದ್ದ ಶಿವರಾಂ ಅವರಿಗೆ ಪಂಚಾಮೃತ ಅಭಿಷೇಕ ಮತ್ತು ಕೇಸರಿ ವಸ್ತ್ರ ಸಮರ್ಪಿಸಿ ಚಿತಾಗಾರಾದಲ್ಲಿ ಸ್ಮಾರ್ತ್ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಸಲಾಯಿತು.

ಈ ವೇಳೆ ಅಯ್ಯಪ್ಪ ಭಕ್ತರು ಭಜನೆ ಮಾಡಿ ಅಯ್ಯಪ್ಪನಿಗೆ ಇಷ್ಟವಾದ ಕರ್ಪೂರವನ್ನು ಸಮರ್ಪಿಸಿದರು. ಶಿವರಾಂ ಪುತ್ರರಾದ ಹಿರಿಯ ಮಗ ರವಿಶಂಕರ್‌ ಮತ್ತು ಲಕ್ಷ್ಮೀಶ್ ಅಗ್ನಿ ಸ್ಪರ್ಶ ಮಾಡಿದರು.
ಈ ಮೊದಲು ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಶಿವರಾಂ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ಚಿತ್ರರಂಗದ ಹಲವು ಮಂದಿ ಹಿರಿಯ ನಟನ ದರ್ಶನ ಪಡೆದು ಕಂಬನಿ ಮಿಡಿದರು.

Leave a Reply

comments

Related Articles

error: