ದೇಶಪ್ರಮುಖ ಸುದ್ದಿವಿದೇಶ

ಇಂದು ಭಾರತಕ್ಕೆ ವ್ಲಾಡಿಮಿರ್ ಪುಟಿನ್ ಭೇಟಿ

ದೇಶ(ನವದೆಹಲಿ),ಡಿ.6:-ಭಾರತ ಮತ್ತು ರಷ್ಯಾದ ದಶಕಗಳ ಹಳೆಯ ಸ್ನೇಹವನ್ನು ಮತ್ತಷ್ಟು ಬಲಪಡಿಸಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ದೆಹಲಿಗೆ ಬರುತ್ತಿದ್ದಾರೆ.
ಕೊರೋನಾ ಬಿಕ್ಕಟ್ಟಿನಿಂದಾಗಿ ಪುಟಿನ್ ಅವರ ಭಾರತ ಭೇಟಿ ಕೆಲವೇ ಗಂಟೆಗಳಿಗೆ ಸೀಮಿತವಾಗಿರಲಿದೆ. ಇದು ಉಭಯ ದೇಶಗಳ ನಡುವಿನ ಸಂಬಂಧದ ಮೇಲೆ ಪರಿಣಾಮ ಬೀರುವುದಲ್ಲದೆ, ಇದು ಭಾರತದ ನೆರೆಯ ದೇಶಗಳಿಗೆ ಡಮಹತ್ವದ ಸಂದೇಶವನ್ನು ರವಾನಿಸಲಿದೆ ಎಂದೇ ಹೇಳಲಾಗುತ್ತಿದೆ.
ಉನ್ನತ ಮೂಲಗಳ ಪ್ರಕಾರ ರಷ್ಯಾ ಅಧ್ಯಕ್ಷ ಪುಟಿನ್ ಮಧ್ಯಾಹ್ನ ದೆಹಲಿಗೆ ತಲುಪಲಿದ್ದು, ಕೇವಲ 6-7 ಗಂಟೆಗಳ ಕಾಲ ಭಾರತದಲ್ಲಿರುತ್ತಾರೆ. ಈ ಸಂದರ್ಭದಲ್ಲಿ ಉಭಯ ದೇಶಗಳ ನಡುವೆ ಹಲವು ಹಂತಗಳಲ್ಲಿ ಮಾತುಕತೆ ನಡೆಯಲಿದೆ. ಮೊದಲಿಗೆ ಉಭಯ ದೇಶಗಳ ವಿದೇಶಾಂಗ ಮತ್ತು ರಕ್ಷಣಾ ಸಚಿವರ ನಡುವೆ ಟು ಪ್ಲಸ್ ಟು ಮಾತುಕತೆ ನಡೆಯಲಿದ್ದು, ನಂತರ ಸಂಜೆ 5.30ಕ್ಕೆ ದೆಹಲಿಯ ಹೈದರಾಬಾದ್ ಹೌಸ್‌ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅಧ್ಯಕ್ಷ ಪುಟಿನ್ 21 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
ಭದ್ರತಾ ಕಾರಣಗಳಿಂದ ಅಧ್ಯಕ್ಷ ಪುಟಿನ್ ಭಾರತಕ್ಕೆ ಆಗಮಿಸುವ ಸಮಯವನ್ನು ಬಹಿರಂಗಪಡಿಸಲಾಗಿಲ್ಲ. ಆದರೆ ಅಂದಾಜಿನ ಪ್ರಕಾರ ರಷ್ಯಾ ಅಧ್ಯಕ್ಷರು ಮಧ್ಯಾಹ್ನ 2 ಗಂಟೆಗೆ ಭಾರತವನ್ನು ತಲುಪಿ, ರಾತ್ರಿ 9.30 ಕ್ಕೆ ತಮ್ಮ ತಾಯ್ನಾಡಿಗೆ ಹಿಂತಿರುಗುತ್ತಾರೆ ಎನ್ನಲಾಗುತ್ತಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: