ಮೈಸೂರು

ಡಾ.ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನ : ಗೌರವ ಸಮರ್ಪಣೆ

ಮೈಸೂರು, ಡಿ.6:- ಮೈಸೂರು ಜಿಲ್ಲಾಡಳಿತದ ವತಿಯಿಂದ ಸೋಮವಾರ ಪುರಭವನದ ಆವರಣದಲ್ಲಿರುವ ಡಾ. ಅಂಬೇಡ್ಕರ್ ಪ್ರತಿಮೆ ಬಳಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆ ಆಚರಿಸಲಾಯಿತು.

ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಗೈದು ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ.ಎಂ.ಯೋಗೀಶ್, ಪಾಲಿಕೆ ಆಯುಕ್ತ ಜಿ. ಲಕ್ಷ್ಮಿಕಾಂತ್ ರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಮಾಲತಿ, ಮುಡಾ ಆಯುಕ್ತ ಡಾ. ಡಿ.ಬಿ.ನಟೇಶ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರೇಮ್ ಕುಮಾರ್, ಉಪವಿಭಾಗಾಧಿಕಾರಿ ಕಮಲಾ ಬಾಯಿ, ಮತ್ತಿತರ ಗಣ್ಯರು ಡಾ. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: