ಮೈಸೂರು

ಡಿ.12 : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

ಮೈಸೂರು,ಡಿ.6:- ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ 2021ರ ಅಧ್ಯಕ್ಷ ಸ್ಥಾನಕ್ಕೆ  ಡಿ.12ರಂದು ಚುನಾವಣೆ ನಡೆಯಲಿದೆ.

ಮೈಸೂರು ಪತ್ರಕರ್ತರ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಆರ್.ಲಕ್ಷ್ಮಿಕಾಂತ್ ಮಾತನಾಡಿ ಕಳೆದ ಮೂವತ್ತು ವರ್ಷಗಳಿಂದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದೇನೆ. ವಿಪ್ರ ಸಮಾಜದ ಏಳಿಗೆಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿಕೊಂಡಿದ್ದು ಅವುಗಳನ್ನು ಅನುಷ್ಠಾನಗೊಳಿಸಲು ವಿಪ್ರರು ಮತ ನೀಡುವಂತೆ ಮನವಿ ಮಾಡಿದರು.

ಡಿ.12ರಂದು ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ ಮೂರು ಗಂಟೆಯವರೆಗೂ ಮತದಾನ ನಡೆಯಲಿದೆ.  ಕೃಷ್ಣಮೂರ್ತಿ ಪುರಂನಲ್ಲಿರುವ ಭಗಿನಿಸೇವಾ ಸಮಾಜದಲ್ಲಿ ಮತದಾನ ನಡೆ ಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ವೆಂಗಿಪುರ ಮಠದ ಇಳೈ ಆಳ್ವಾರ್ ಸ್ವಾಮೀಜಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷ ಡಾ.ಕೆ.ರಘುರಾಂ ವಾಜಪೇಯಿ, ತಾಲೂಕು ಬ್ರಾಹ್ಮಣ ಸಂಘದ  ಅಧ್ಯಕ್ಷರಾದ ಗೋಪಾಲರಾವ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

 

Leave a Reply

comments

Related Articles

error: