ನಮ್ಮೂರುಮೈಸೂರು

ರಾಜ್ಯದಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿರುವ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದೆ. ಮಾಜಿ ಸಂಸದ ಧೃವನಾರಾಯಣ್ .

ಮೈಸೂರು,ಡಿ.07 : ರಾಜ್ಯದಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿರುವ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದೆ ಎಂದು ಮಾಜಿ ಸಂಸದ ಧೃವನಾರಾಯಣ್ ಹೇಳಿದ್ದಾರೆ.

ವಿಧಾನ ಪರಿಷತ್ ಚುನಾವಣೆಯ ಹಿನ್ನಲೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿರುವ ಮಾಜಿ ಸಂಸದ ಧೃವನಾರಾಯಣ್, ಮೈಸೂರು ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಕ್ಯಾಂಪಸ್ ನಲ್ಲಿ  ಮಾಧ್ಯಮದೊಂದಿಗೆ ಮಾತನಾಡಿ , ಜೆಡಿಎಸ್ ಪಕ್ಷಕ್ಕೆ ಭಯ,ಆತಂಕ ಶುರುವಾಗಿದೆ. ರಾಜ್ಯದಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಆದ್ದರಿಂದ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗುತ್ತಿದೆ ಎಂದು ಹೇಳಿದ್ದಾರೆ.

ಜಾತ್ಯಾತೀತ ಜನತಾದಳ ಎಂಬ ಹೆಸರಿಟ್ಟುಕೊಂಡು ಕೋಮುವಾದಿ ಪಕ್ಷದೊಂದಿಗೆ ಸೇರಿಕೊಳ್ಳುತ್ತಿದೆ. ಬಿಜೆಪಿಯೂ ಇದನ್ನು ಸರಿಯಾಗಿ‌ ಉಪಯೋಗಿಸಿಕೊಳ್ಳುತ್ತಿದೆ. ಈ ಹಿಂದಿನ ಸಿಂದಗಿ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲ ಮಾಡಿಕೊಡಲು ಜಾ.ದಳ ಮುಸ್ಲಿಂ ಅಭ್ಯರ್ಥಿಗಳನ್ನು ನಿಲ್ಲಿಸಿದರು. ಆದರೆ, ಅದು ಅಲ್ಲಿ ಫಲಿಸಲಿಲ್ಲ ಎಂದಿದ್ದಾರೆ.

ಮೇಲ್ಮನೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದ್ದರಿಂದ ತಿಮ್ಮಯ್ಯ ಅವರು ಮೊದಲ ಪ್ರಾಶಸ್ತ್ಯ ಮತದಲ್ಲೇ ಗೆಲ್ಲುವುದು ಖಚಿತ. ಒಟ್ಟಾರೆ ಎರಡೂ ಪಕ್ಷಗಳಿಗಿಂತ ಹೆಚ್ಚಿನ ಮತಗಳ ಅಂತರದಿಂದ ಗೆಲವು ಸಾಧಿಸಬೇಕು ಎಂಬುದು ಕಾಂಗ್ರೆಸ್ ನ ಗುರಿಯಾಗಿದೆ ಎಂದು ತಮ್ಮ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.(ಎಸ್.ಎಂ,ಕೆ.ಎಸ್)

Leave a Reply

comments

Related Articles

error: