Uncategorizedಕರ್ನಾಟಕಪ್ರಮುಖ ಸುದ್ದಿ

ವಿಧಾನ ಪರಿಷತ್ ಚುನಾವಣೆಯಲ್ಲಿ ನಾವು ಯಾರೊಂದಿಗೂ ಮೈತ್ರಿಯಾಗಿಲ್ಲ : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ

ರಾಜ್ಯ(ಬೆಂಗಳೂರು),ಡಿ.07 : ವಿಧಾನ ಪರಿಷತ್ ಚುನಾವಣೆಯಲ್ಲಿ ಮತ್ತು ಮುಂದಿನ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷ ತಳೆದಿರುವ ನಿಲುವನ್ನು ಬಹಿರಂಗಪಡಿಸಲು ಪಕ್ಷದ ಹಿರಿಯ ನಾಯಕ,ಮಾಜಿ ಮುಖ್ಯ ಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿಯೊಂದನ್ನು ನಡೆಸಿದ್ದಾರೆ.

ಬೆಂಗಳೂರಿನ ಜೆ.ಪಿ ನಗರದಲ್ಲಿರುವ  ಜೆಡಿಎಸ್ ಪಕ್ಷದ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಡಿ.ಕೆ, ವಿಧಾನ ಪರಿಷತ್ ಚುನಾವಣಾ ಪ್ರಚಾರದ ಅಂತಿಮ ಹಂತಕ್ಕೆ ಬಂದಿದ್ದೇವೇ. ಪರಿಷತ್ ಚುನಾವಣೆಯ ಜೆಡಿಎಸ್ ನಿಲುವಿನ ಬಗ್ಗೆ ಸಾಕಷ್ಟು ಕುತೂಹಲವಿದೆ. ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿದೆ ಎಂದು ಊಹಪೋಹದ ಸುದ್ದಿಗಳು ಸದ್ದು ಮಾಡುತ್ತಿವೆ, ಚುನಾವಣೆ ಘೋಷಣೆ ಬಳಿಕ ಕಾಂಗ್ರೆಸ್ ಪಕ್ಷವು ನಮ್ಮ ಪಕ್ಷವನ್ನು ಬಿಜೆಪಿಯ ಬಿ ಟೀಮ್ ಎಂದು ಹೇಳುತ್ತಿದೆ ಎಂದು ಹೇಳಿದ್ದಾರೆ. ಜೆಡಿಎಸ್ ಆರು ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಿಸಿ ಬೇರೆ ಕಡೆ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಹೇಳುತ್ತಿದ್ದಾರೆ, ಆದರೆ ಬಿಜೆಪಿ ಪಕ್ಷವು ನಮ್ಮಿಂದ ಯಾವುದೇ ಬೆಂಬಲ ಕೋರಿಲ್ಲ. ಅದರೆ ಯಡಿಯೂರಪ್ಪ ಜೆಡಿಎಸ್ ಅಭ್ಯರ್ಥಿ ಇಲ್ಲದ ಕಡೆ ನಮಗೆ ಬೆಂಬಲ ನೀಡಿ ಎಂದು ಹೇಳಿದ್ದಾರೆ. ಅದು ಅಷ್ಟಕ್ಕೆ ಸೀಮಿತವಾಗಿದೆ. ಹಾಗಂತ ಇದು ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲ . ಜೆಡಿಎಸ್ ಅಭ್ಯರ್ಥಿ ಇಲ್ಲದ ಕಡೆ ಬೆಂಬಲ ನೀಡಿ ಎಂದು ಕೇಳಿರುವು ನಿಜ  ಅಂತ ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.

ನಾವು ಅಭ್ಯರ್ಥಿ ಹಾಕಿರುವ ಜಾಗದಲ್ಲಿ ಯಾರ ಜೊತೆಯೂ ಹೊಂದಾಣಿಕೆ ಮಾಡಿಕೊಂಡಿಲ್ಲ .ಎರಡೂ ರಾಷ್ಟ್ರೀಯ ಪಕ್ಷಗಳ ನಡುವೆ ನಾವು ಹೋರಾಟ ಮಾಡುತ್ತಿದ್ದೆವೇ ಎಂದು ತಿಳಿಸಿದ್ದಾರೆ. (ಎಸ್.ಎಂ,ಎಸ್.ಹೆಚ್)

Leave a Reply

comments

Related Articles

error: