ನಮ್ಮೂರುಮೈಸೂರು

ಇಂಜಿನಿಯರಿಂಗ್ ಪ್ರವೇಶ ಶುಲ್ಕ ಹೆಚ್ಚಳ ಖಂಡಿಸಿ  ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್

ಮೈಸೂರು,ಡಿ.07 : ಇಂಜಿನಿಯರಿಂಗ್ ಪ್ರವೇಶ ಶುಲ್ಕ ಹೆಚ್ಚಳ ಖಂಡಿಸಿ  ಮೈಸೂರಿನಲ್ಲಿ ಇಂದು  ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿತು.

ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆಯನ್ನು ನಡೆಸಿ, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ಮಾತನಾಡಿ, ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳದಿಂದ ಖಾಸಗಿ ಕಾಲೇಜಿಗೆ ಮತ್ತು ಸರ್ಕಾರಿ ಕಾಲೇಜುಗಳಿಗೆ ಯಾವುದೆ ವ್ಯಾತ್ಯಾಸ ಇಲ್ಲದಾಗಿದೆ.ಮೆರಿಟ್ ಪಡೆದು ಬರುವ ಬಡ ವಿಧ್ಯಾರ್ಥಿಗಳು ಶುಲ್ಕ ಹೆಚ್ಚಳದಿಂದ ವಿದ್ಯಾಭ್ಯಾಸದಿಂದ ವಂಚಿತರಾಗುತ್ತಿದ್ದಾರೆ. ಕೂಡಲೇ ಸರ್ಕಾರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಪ್ರವೇಶ ಶುಲ್ಕ ಹೆಚ್ಚಳ ವಾಪಾಸ್ ಪಡೆಯುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಘೊಷಣೆಗಳನ್ನು ಕೂಗಿ ಅಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. (ಎಸ್.ಎಂ, ಕೆ.ಎಸ್.)

Leave a Reply

comments

Related Articles

error: