ನಮ್ಮೂರುಮೈಸೂರು

ನೂರಕ್ಕೆ ನೂರು ಕಾಂಗ್ರೆಸ್ ಗೆಲುವು ಖಚಿತ : ಬಿಎಂ ರಾಮು

ಮೈಸೂರು,ಡಿ.8 :- ಮೈಸೂರು-ಚಾಮರಾಜನಗರ ಸ್ಥಳೀಯ ಸಂಸ್ಥೆ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಡಿ ತಿಮ್ಮಯ್ಯನವರು ಮೊದಲ ಸುತ್ತಿನ ಅತ್ಯಧಿಕ ಮತಗಳಿಂದ ಜಯಗಳಿಸುವ ವಿಶ್ವಾಸವಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿಎಂ ರಾಮು ವಿಶ್ವಾಸ ವ್ಯಕ್ತಪಡಿಸಿದರು.

ಇಂದು ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ಕ್ಷೇತ್ರಕ್ಕೆ ಸೇರುವ ತಾಂಡವಪುರ ಮರಳೂರು ರಾಂಪುರ ಗ್ರಾಮ ಪಂಚಾಯಿತಿಗಳ ಸದಸ್ಯರುಗಳಿಗೆ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಬಿ ಎಂ ರಾಮು, ಎರಡು ಜಿಲ್ಲೆಯಲ್ಲೂ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಡಿ ತಿಮ್ಮಯ್ಯ ಅವರಿಗೆ ಗ್ರಾಮ ಪಂಚಾಯಿತಿ ಸದಸ್ಯರುಗಳ ಒಲವು ಕಂಡುಬಂದಿದ್ದು, ನಮ್ಮ ಪಕ್ಷದ ಅಭ್ಯರ್ಥಿ ನೂರಕ್ಕೆ ನೂರು ಪ್ರಥಮ ಪ್ರಾಶಸ್ತ್ಯ ನೀಡುವ ಮೂಲಕ ಭಾರೀ ಬಹುಮತದಲ್ಲಿ ಗೆಲ್ಲಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಕೈ ಬಲಗೊಳಿಸುವ ಮೂಲಕ ಮುಂದಿನ 2023 ನೇ ಚುನಾವಣೆಗೆ ಹೆಚ್ಚಿನ ಬಲ ತಂದುಕೊಡುವ ವಿಶ್ವಾಸ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಯಾರು ಏನೇ ಹೇಳಿದರೂ ಕೂಡ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಡಾ. ಡಿ.ತಿಮ್ಮಯ್ಯ ಅವರಿಗೆ ಮೊದಲನೇ ಮತವನ್ನು ನೀಡಿ ಕಾಂಗ್ರೆಸ್ ಪಕ್ಷದ ಶಕ್ತಿ ಏನೆಂದು ತೋರಿಸಿ ಕೊಡಲಿದ್ದಾರೆ ಎಂದು ತಿಳಿಸಿದರು.

ಈ ಸಭೆಯಲ್ಲಿ ತಾಂಡವಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಧುರ ಆನಂದ್, ಮರಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಕನ್ಯ, ಉಮೇಶ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶಿವಣ್ಣ,ತಾಂಡವಪುರ ಗ್ರಾಮ ಪಚಾಯಿತಿ ಉಪಾಧ್ಯಕ್ಷರಾದ ಲೀಲಾವತಿ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪಿ ಗಿರೀಶ್, ಅಡಕನಹಳ್ಳಿ ಹುಂಡಿ ಬಿ ಶಿವಣ್ಣ , ಮುಖಂಡರಾದ ಬಿ.ಆರ್. ರಾಕೇಶ್,  ಬಿ.ಎಂ.ನಾಗರಾಜು, ಬಿ.ಬಿ.ಕುಮಾರ್ ಸೇರಿದಂತೆ ಎಲ್ಲ ಗ್ರಾಮ ಪಂಚಾಯತ್ ಸದಸ್ಯರು ಹಾಜರಿದ್ದರು.(ಕೆ.ಎಸ್, ಎಸ್.ಎಂ)

Leave a Reply

comments

Related Articles

error: