ಮೈಸೂರು

ಇಂದು ನಡೆಯಲಿದೆ ಮಸ್ಟರಿಂಗ್ ಕಾರ್ಯ

ಮೈಸೂರು, ಡಿ.9:- ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಮತದಾನ ನಾಳೆ ನಡೆಯಲಿದ್ದು ಮೈಸೂರು-ಚಾಮರಾಜನಗರ ಕ್ಷೇತ್ರದ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಒಟ್ಟು 393 ಮತಗಟ್ಟೆಗಳ ಸ್ಥಾಪನೆ(ಮೈಸೂರು-259, ಚಾಮರಾಜನಗರ-134) ಮಾಡಲಾಗಿದ್ದು, ಮತದಾನ ಕಾರ್ಯಕ್ಕೆ 1809 ಸಿಬ್ಬಂದಿ ಬಳಕೆ ಮಾಡಲಾಗುತ್ತಿದೆ. ಇಂದು ಚುನಾವಣಾ ಮಸ್ಟರಿಂಗ್ ಕಾರ್ಯ ನಡೆಯಲಿದೆ. ನಂಜನಗೂಡು, ಟಿ.ನರಸೀಪುರ, ಹುಣಸೂರು, ಪಿರಿಯಾಪಟ್ಟಣ, ಹೆಚ್.ಡಿ.ಕೋಟೆ, ಸರಗೂರು, ಕೆ.ಆರ್.ನಗರ, ಮೈಸೂರು ಸೇರಿ ಆಯಾ ತಾಲ್ಲೂಕು ಕಚೇರಿಗಳಲ್ಲಿ ಮಸ್ಟರಿಂಗ್ ಕಾರ್ಯ ನಡೆಯಲಿದೆ.
ಜಿಲ್ಲೆಯಲ್ಲಿ ಈಗಾಗಲೇ144 ಸೆಕ್ಷನ್ ಜಾರಿ ಮಾಡಲಾಗಿದ್ದು, ಮದ್ಯಮಾರಾಟ, ಸಂತೆ-ಜಾತ್ರೆಗೆ ನಿರ್ಬಂಧ ವಿಧಿಸಲಾಗಿದೆ. ಶಾಂತಿಯುತ ಮತದಾನಕ್ಕಾಗಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಮೈಸೂರಿನ ಪಡುವಾರಹಳ್ಳಿಯ ಮಹಾರಾಣಿ‌ ಕಾಲೇಜಿನಲ್ಲಿ ಸ್ಟ್ರಾಂಗ್ ರೂಂ ನಿರ್ಮಾಣ ಮಾಡಲಾಗಿದೆ. ನಾಳೆ ಪರಿಷತ್ 25 ಸ್ಥಾನಗಳಿಗೆ ಮತದಾನ ನಡೆಯಲಿದ್ದು ಡಿಸೆಂಬರ್ 14ಕ್ಕೆ ಫಲಿತಾಂಶ ಹೊರಬೀಳಲಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: