ನಮ್ಮೂರುಮೈಸೂರು

ಶೋಷಿತ ವರ್ಗಗಳ ಮೇಲೆ ಅಪಾರ ಕಾಳಜಿ ಹೊಂದಿರುವ ವ್ಯಕ್ತಿ ಡಾ.ಡಿ.ತಿಮ್ಮಯ್ಯ

ಮೈಸೂರು,ಡಿ.9 : – ಮೈಸೂರು-ಚಾಮರಾಜನಗರ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಡಿ.ತಿಮ್ಮಯ್ಯನವರನ್ನು ಬೆಂಬಲಿಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮನವಿ ಮಾಡಿದೆ.

ಇಂದು ಮೈಸೂರು  ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ  ಜಾಗೃತ ವೇದಿಕೆ ಅಧ್ಯಕ್ಷರಾದ ಕೆ.ಎಸ್.ಶಿವರಾಮು ಮಾತನಾಡಿ, ಮೈಸೂರು ಮತ್ತು ಚಾಮರಾಜನಗರದಿಂದ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾದ ವೃತ್ತಿಯಲ್ಲಿ ವೈದ್ಯರು ಆದ ಡಾ.ಡಿ. ತಿಮ್ಮಯ್ಯರವರು ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದು, ಸಾಮಾಜಿಕ ನ್ಯಾಯ, ಸಮ ಸಮಾಜದ ಪರಿಕಲ್ಪನೆಯನ್ನು ಹೊಂದಿರುವ ವ್ಯಕ್ತಿ , ಮತ್ತು ಶೋಷಿತ ವರ್ಗಗಳ ಬಗ್ಗೆ ಅಪಾರ ಕಾಳಜಿ ಹಾಗೂ ಸಾಮರಸ್ಯದ ಬದುಕನ್ನು ಹಾಗೂ ಆ ಮೂಲಕ ಸಮಾನತೆಯ ಸಮಾಜವನ್ನು ಕಟ್ಟುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.

ಮೈಸೂರು ಮತ್ತು ಚಾಮರಾಜನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಡಾ. ಡಿ. ತಿಮ್ಮಯ್ಯರವರಿಗೆ ಮೊದಲ ಪ್ರಾಶಸ್ತ್ಯ ದ ಮತವನ್ನು ನೀಡಿ ಜಯಶೀಲರನ್ನಾಗಿ ಮಾಡಬೇಕೆಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಹೆಚ್.ಎನ್.ಪ್ರಕಾಶ, ಜಾಹಳ್ಳಿ ಪುಟ್ಟಸ್ವಾಮಿ, ಎನ್.ಆರ್.ನಾಗೇಶ್, ಲೋಕೇಶ್ ಕುಮಾರ್, ಹರೀಶ್, ರೋಹಿತ್, ಆರ್.ಕೆ.ರವಿ ಉಪಸ್ಥಿತರಿದ್ದರು.(ಕೆ.ಎಸ್, ಎಸ್.ಎಂ)

Leave a Reply

comments

Related Articles

error: