ನಮ್ಮೂರುಮೈಸೂರು

ರಸ್ತೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಶಾಸಕ ನಾಗೇಂದ್ರ ಭೇಟಿ : ಪರಿಶೀಲನೆ

ಮೈಸೂರು,ಡಿ.9 : 4.96 ಕೊಟಿ ವೆಚ್ಚದಲ್ಲಿ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ರಸ್ತೆ ಅಭಿವೃದ್ದಿ  ಡಾಂಬರೀಕರಣ ಕಾಮಗಾರಿಯ ಸ್ಥಳಕ್ಕೆ ಶಾಸಕರಾದ  ಎಲ್.ನಾಗೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದರು.

ಚಾಮರಾಜ ಕ್ಷೇತ್ರದ ಶಾಸಕರಾದ  ಎಲ್.ನಾಗೇಂದ್ರ ಅವರು ಇಂದು  ವಿಜಯನಗರ 1ನೇ ಹಂತದ ಕಾಳಿದಾಸ ರಸ್ತೆಯಿಂದ ಹೆಬ್ಬಾಳು ರಿಂಗ್ ರಸ್ತೆಯವರೆಗೆ ಒಟ್ಟು ರೂ. 4.93 ಕೋಟಿ ವೆಚ್ಚದಲ್ಲಿ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ರಸ್ತೆ ಅಭಿವೃದ್ದಿ ಕಾಮಗಾರಿಯ, ರಸ್ತೆ ಡಾಂಬರೀಕರಣ ಕಾಮಗಾರಿಯ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು, ಗುಣಮಟ್ಟ ಕಾಯ್ದುಕೊಳ್ಳುವಂತೆ ಹಾಗೂ ರಸ್ತೆಯನ್ನು ಗರಿಷ್ಠ ಮಟ್ಟದಲ್ಲಿ ವಿಸ್ತರಿಸಿಕೊಂಡು ಕಾಮಗಾರಿ ನಿರ್ವಹಿಸುವಂತೆ ಸೂಚನೆ ನೀಡಿದರು,

ಈ ಸಮಯದಲ್ಲಿ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಅಭಿಯಂತರ  ರವೀಂದ್ರ, ಗುತ್ತಿಗೆದಾರರು ಇಂಜಿನಿಯರುಗಳು ಹಾಜರಿದ್ದರು.(ಜಿ.ಕೆ, ಎಸ್.ಎಂ)

Leave a Reply

comments

Related Articles

error: