ಕರ್ನಾಟಕಪ್ರಮುಖ ಸುದ್ದಿ

ಕೆಜೆಪಿ ಸ್ಥಾಪನೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ : ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ವಾಗ್ದಾಳಿ

ರಾಜ್ಯ, ಪ್ರಮುಖ ಸುದ್ದಿ (ರಾಯಚೂರು) ಮೇ 3 : ಯಡಿಯೂರಪ್ಪ ಅವರು ಕರ್ನಾಟಕ ಜನತಾ ಪಕ್ಷ (ಕೆಜೆಪಿ) ಸ್ಥಾಪನೆ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದರು.

ಇತ್ತೀಚೆಗೆ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗದ ಸಂಘಟನೆಗಾಗಿ ಶ್ರಮಿಸುವುದಾದರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ ಶಾ ಅವರು ಮುಂದುವರಿಸಲು ತಿಳಿಸಿದ್ದಾರೆ. ಬಿಜೆಪಿ ಪಕ್ಷದ ಸಂಘಟನೆಗಾಗಿ ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಅಪ್ಪ ಅಮ್ಮನಿಗೆ ಹುಟ್ಟಿದ್ದೇನೆ ಎಂದು ಹೇಳಿರುವುದಾಗಿ ಎಂದು ಸ್ಪಷ್ಟಪಡಿಸಿದರು.

ತಮ್ಮ ರಕ್ತದ ಕಣಕಣದಲ್ಲಿಯೂ ಬಿಜೆಪಿ ಇದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಬೆಂಬಲಿಸುತ್ತಿರುವುದಾಗಿ ಹೇಳಿರುವುದು ಸುಳ್ಳುವದಂತಿ ಹಬ್ಬಿಸಲಾಗಿದೆ. 24 ಜನ ಪಕ್ಷದ ಹಿರಿಯ ನಾಯಕರು ಒಂದು ಕೋಟಿ ಸದಸ್ಯತ್ವವನ್ನು ನೋಂದಣಿ ಮಾಡಿಸಿದ್ದಾರೆ ಎಂದು ತಿಳಿಸಿದರು.

ಪಕ್ಷದಲ್ಲಿನ ಗೊಂದಲವನ್ನು ಪರಿಹರಿಸಲು ನಾಲ್ಕು ಜನರನ್ನೊಳಗೊಂಡ ತಂಡವನ್ನು ರಚನೆ ಮಾಡಲಾಗಿತ್ತು. ಆದರೂ ಇದುವರೆಗೂ ಸಮಸ್ಯೆ ಪರಿಹಾರವಾಗಿಲ್ಲ. ಆದರೂ ಪಕ್ಷದಲ್ಲಿ ಗೊಂದಲ ಮುಂದುವರೆದಿದೆ ಎಂದು ಹೇಳಿದರು.

ಸಂಘಟನೆ ಉಳಿಸೋಣ ಭಿನ್ನಮತ ಕಾರ್ಯಕ್ರಮದ ಹಿಂದೆ ಸಂತೋಷಜಿ ಇದ್ದಾರೆ ಎಂಬ ಬಿ.ಎಸ್. ಯಡಿಯೂರಪ್ಪ ಅವರ ಮಾತು ನೋವು ತಂದಿದೆ. ಸಂಘಟನೆ ಮಾಡುವುದರೊಂದಿಗೆ ಬಿಜೆಪಿ ಪಕ್ಷದ ಸರ್ಕಾರ ತರಬೇಕು ಎಂಬ ಉದ್ದೇಶ ಹೊಂದಲಾಗಿದೆ. ಯೂಡಿಯರಪ್ಪ ಅವರೇ ಮುಖ್ಯಮಂತ್ರಿಗಳಾಗುತ್ತಾರೆ ಎಂದು ತಿಳಿಸಿದರು.

ಬಿಜೆಪಿ ಪಕ್ಷಕ್ಕೂ ಸಂಗೊಳ್ಳಿರಾಯಣ್ಣ ಬ್ರಿಗೇಡ್‍ಗೂ ಯಾವುದೇ ಸಂಬಂಧವಿಲ್ಲ. ಪಕ್ಷದಲ್ಲಿರುವ ಗೊಂದಲ ಬಹಳಷ್ಟು ದಿನಗಳು ಇರುವುದಿಲ್ಲ. ಹಿರಿಯರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್ ಅವರು ಬಿಜೆಪಿ ಗೊಂದಲ ಕುರಿತು ವರದಿ ನೀಡಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮೈಸೂರಿನಲ್ಲಿ ಮೇ 6, 7 ರಂದು ರಾಜ್ಯ ಕಾರ್ಯಕಾರಿಣಿ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಮಾಹಿತಿ ಬಂದರೆ ಸಭೆಯಲ್ಲಿ ಭಾಗವಹಿಸುತ್ತೇನೆ. 8 ರಂದು ರಾಯಚೂರಿನಲ್ಲಿ ರಾಜ್ಯ ಮಟ್ಟದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮತ್ತು ಯುವ ಬ್ರಿಗೇಡ್ ಅಭ್ಯಾಸ ವರ್ಗ ನಡೆಯಲಿದೆ ಎಂದು ಹೇಳಿದರು.

ಮಾಜಿ ಸಂಸದ ಕೆ.ವಿರುಪಾಕ್ಷಪ್ಪ, ಅಶೋಕ ಗಸ್ತಿ, ಸತೀಶ ಕುಮಾರ, ಶಿವರಾಜ ಮರ್ಚೆಟ್‍ಹಾಳ್ ಹಾಗೂ ಮತ್ತಿತರರಿದ್ದರು.

(ಎನ್.ಬಿ.ಎನ್)

Leave a Reply

comments

Related Articles

error: