ಕರ್ನಾಟಕಪ್ರಮುಖ ಸುದ್ದಿ

ಸಿದ್ದರಾಮಯ್ಯ ವೇಸ್ಟ್ ಬಾಡಿ : ರಮೇಶ್ ಜಾರಕಿಹೊಳಿ ವಾಗ್ದಾಳಿ

ರಾಜ್ಯ(ಬೆಳಗಾವಿ), ಡಿ.15 :- ಸಿದ್ದರಾಮಯ್ಯಗೆ ಭಯ ಶುರುವಾಗಿದೆ, ವೇಸ್ಟ್ ಬಾಡಿ ಎಂದು ಎಂದು ಬಿಜೆಪಿ ಮಾಜಿ ಶಾಸಕ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.
ರಮೇಶ್ ಜಾರಕಿಹೊಳಿ ರವರು ಇಂದು ಬೆಳಗ್ಗೆ ಬೆಳಗಾವಿಯಲ್ಲಿರುವ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಧಾನಪರಿಷತ್ ಚುನಾವಣೆಯ ಫಲಿತಾಂಶಗಳ ಬಗ್ಗೆ ಮಾತನಾಡಬಾರದು ಅಂತ ನಮ್ಮ ಪಕ್ಷದ ವರಿಷ್ಠರಿಂದ ನಮಗೆ ಸಲಹೆ ಬಂದಿದೆ. ಆದ್ದರಿಂದ ನಾವು ಮಾತನಾಡುವುದಿಲ್ಲ, ನಾವು ಸೋಲನ್ನು ಕಂಡಿರುವುದಕ್ಕೆ ಕಾರಣವೇನು ಎಂದು ಪಕ್ಷದಲ್ಲಿ ಅಂತರಿಕ ಸಭೆಯನ್ನು ನಡೆಸಿ ಚರ್ಚೆ ಮಾಡುತ್ತೇವೆ. ಈ ಚುನಾವಣೆಯಲ್ಲಿ ನಾನು ಬಿಜೆಪಿಯ ಒಬ್ಬ ಶಾಸಕನಾಗಿ ಏನೂ ಕೆಲಸ ಮಾಡಬೇಕಾಗಿತ್ತೋ ಅದನ್ನು ಮಾಡಿದ್ದೇನೆ ಎಂದು ಹೇಳಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಭಯ ಹುಟ್ಟಿದೆ. ಸಿದ್ದರಾಮಯ್ಯ ವೇಸ್ಟ್ ಬಾಡಿ , ಹಿಂದುಳಿದವರ ಪ್ರಮುಖ ನಾಯಕ ಮುಂದಿನ ದಿನಗಳಲ್ಲಿ ಹೊರ ಬೀಳುತ್ತಾರೆ. ಅವರ ಜನರೇ ಅವರನ್ನು ರಿಜೆಕ್ಟ್ ಮಾಡುತ್ತಿದ್ದಾರೆ, ಅವರದು ಇನ್ನು ಮುಗಿದ ಕಥೆ, ಮುಂದಿನ ಚುನಾವಣೆಯಲ್ಲಿ ಸೋಲುತ್ತಾನೆ ಎಂದು ಏಕವಚನದಲ್ಲಿಯೇ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇವತ್ತು ಅವರ ಪಕ್ಷ ಗೆದ್ದಿದೆ ಅದರ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ನನಗಿಲ್ಲ. ಕೆಲವೇ ದಿನಗಳಲ್ಲಿ ಬಹಿರಂಗವಾಗಿ ಡಿ.ಕೆ.ಶಿ ಹೇಳಿಕೆ ಬಗ್ಗೆ ಕಠೋರ ಉತ್ತರ ಕೊಡುತ್ತೇನೆ ಎಂದಿದ್ದಾರೆ. (ಎಸ್.ಎಂ,ಎಸ್.ಎಚ್)

Leave a Reply

comments

Related Articles

error: