ದೇಶಪ್ರಮುಖ ಸುದ್ದಿ

ಉತ್ತರ ಪ್ರದೇಶದ ಬಿಜೆಪಿ ಸಂಸದರ ಜೊತೆ ಪ್ರಧಾನಿ ಮೋದಿ ಸಭೆ

ದೇಶ(ನವದೆಹಲಿ),ಡಿ.17:- ಮುಂಬರುವ ಚುನಾವಣೆಗೆ ಬಿಜೆಪಿ  ಕಾರ್ಯತಂತ್ರವನ್ನು ರೂಪಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಸಂಸದರ ಸಭೆ ಆರಂಭವಾಗಿದೆ. ಮಾಹಿತಿ ಪ್ರಕಾರ, ಪ್ರಧಾನಿ ಮೋದಿ ಉತ್ತರ ಪ್ರದೇಶದ 40 ಸಂಸದರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಉಪಹಾರದ ವೇಳೆ ನಡೆಯುವ ಈ ಸಭೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭಾ ಸಂಸದರು ಭಾಗವಹಿಸುತ್ತಿದ್ದಾರೆ. ಇದಾದ ಬಳಿಕ ಉತ್ತರಾಖಂಡದ ಸಂಸದರನ್ನೂ ಭೇಟಿ ಮಾಡಲಿದ್ದಾರೆ. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕೂಡ ಇದ್ದಾರೆ.

ಈ ಹಿಂದೆ ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆ ಬಳಿಕ ಬಿಜೆಪಿಯ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಭೆಯನ್ನೂ ನಡೆಸಿದ್ದರು. ಗಮನಾರ್ಹವೆಂದರೆ ಮುಂದಿನ ವರ್ಷದ ಆರಂಭದಲ್ಲಿ ಈ ಎರಡು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಪಕ್ಷದ ಮೂಲಗಳ ಪ್ರಕಾರ, ಈ ಸಭೆಯಲ್ಲಿ ಪ್ರಧಾನಿಯವರು ಎರಡೂ ರಾಜ್ಯಗಳ ಸಂಸದರಿಗೆ ಚುನಾವಣೆಗೆ ಸಂಬಂಧಿಸಿದಂತೆ ಕೆಲವು ವಿಶೇಷ ಸೂಚನೆಗಳನ್ನು ನೀಡಲಿದ್ದಾರೆ. ಅಧಿವೇಶನದ ವೇಳೆ ಪ್ರಧಾನಿಯವರು ಗೋವಾ ಮತ್ತು ಪಂಜಾಬ್ ಸಂಸದರ ಜೊತೆಯೂ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: