ಕರ್ನಾಟಕಪ್ರಮುಖ ಸುದ್ದಿಮೈಸೂರು

ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯೋದು ಸುಲಭ ಅಲ್ಲ : ಕಾಂಗ್ರೆಸ್ ನಾಯಕರ ವಿರುದ್ಧ ಹೆಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು,ಡಿ.17:- ಅಧಿವೇಶನಕ್ಕೆ ಹೋಗಲು ಆರೋಗ್ಯದ ಕಾರಣ  ಸಾಧ್ಯವಾಗಲಿಲ್ಲ. ವೈದ್ಯರು ಎರಡು ತಿಂಗಳು ವಿಶ್ರಾಂತಿಗೆ ಸೂಚಿಸಿದ್ದಾರೆ. ಈ ಬಗ್ಗೆ ಸ್ಪೀಕರ್ ಬಳಿ ಅನುಮತಿ ಪಡೆದಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ತಿಳಿಸಿದರು.

ಮೈಸೂರಿನಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ  ಸಿದ್ದರಾಮಯ್ಯ ಡಿ.ಕೆ ಶಿವಕುಮಾರ್ ಅನುಭವಿಗಳು. ಸದನದಲ್ಲಿ ಮಾತನಾಡುವುದನ್ನು ಬೀದಿಯಲ್ಲಿ ಮಾತನಾಡುತ್ತಿದ್ದಾರೆ. ಇದು ಸಮಂಜಸವಲ್ಲ. 40% ಕಮಿಷನ್ ಬಗ್ಗೆ ತನಿಖೆಯಾಗಬೇಕು. ಅನ್ನೋದನ್ನು ಸದನದ ಒಳಗೆ ಕೇಳಬೇಕು. ಅದಕ್ಕೆ ಪೂರಕ ಸಾಕ್ಷಿ ದಾಖಲೆಯೊಂದಿಗೆ ಕೇಳಬೇಕು. ನೀವು ಮಾತ್ರ ಸತ್ಯವಂತರು‌ ಬಿಜೆಪಿ ಪರ್ಸೆಂಟೇಜ್ ಅವರು ಅಂತಾರೆ. ನಾನು ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡಲ್ಲ. ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತೇನೆ. ನಿಮ್ಮ ಸರ್ಕಾರ ಇದ್ದಾಗ ಡಿಕೆಶಿ 7 ಸಾವಿರ ಕೋಟಿ ಸೋಲಾರ್ ಟೆಂಡರ್ 3 ನಿಮಿಷದಲ್ಲಿ ಮುಗಿದಿದೆ. ಟೆಂಡರ್ ಭಾಗ್ಯ ಸಿದ್ದರಾಮಯ್ಯ ಕಾಲದಲ್ಲಿ ಆಗಿದ್ದು. ಸತ್ಯವಂತ ಸಿದ್ದರಾಮಯ್ಯ ಲೋಕಾಯುಕ್ತ ಏಕೆ ಸ್ಕ್ಯ್ರಾಪ್ ಮಾಡಿದಿರಿ.? ಲೋಕಾಯುಕ್ತ ಬಿ.ಎಸ್ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗಲೇ ಜೈಲಿಗೆ ಹಾಕಿತ್ತು. ಅರ್ಕಾವತಿ ರೀ ಡೂ ಹೊಸ ಹೆಸರು ನೀಡಿದಿರಿ. ಲ್ಯಾಂಡ್ ಡೀ ನೋಟಿಫಿಕೇಶನ್‌ಗೆ ಹೊಸ ಹೆಸರು. 40% ಜೊತೆಗೆ ರೀ ಡೂ ಸಹಾ ತನಿಖೆಯಾಗಲಿ. ಆಗ ಯಾರು ಸತ್ಯವಂತರು ಅಂತ ಗೊತ್ತಾಗುತ್ತೇ. ಯಾರು ಇದನ್ನು ಮರೆತಿಲ್ಲ ಸಿದ್ದರಾಮಯ್ಯ ಅವರೇ ಎಂದು ವಾಗ್ದಾಳಿ ನಡೆಸಿದರು.

ಸಚಿವ ಆಂಜನೇಯ ಅವರ ಬೆಡ್‌ ಶೀಟ್ ಭ್ರಷ್ಟಾಚಾರ,  ನೀವೆ ಸಿಎಂ ಆಗಿದ್ದಾಗಲೇ ಭ್ರಷ್ಟಾಚಾರ. ಇದು ಜಗಜ್ಜಾಹಿರವಾಗಿರುವ ವಿಚಾರ. ಸ್ಟೀಲ್ ಬ್ರಿಡ್ಜ್‌ನಲ್ಲಿ ಎಷ್ಟು ಪರ್ಸೆಂಟೇಜ್, ನೀವು ಮಹಾದೇವಪ್ಪ ಏಕೆ ಮಾತು ಬಿಟ್ಟಿದ್ದೀರಿ.? ಜನರಿಗೆ ಇದರ ಕಾರಣ ನೀಡಿ. ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯೋದು ಸುಲಭ ಅಲ್ಲ. ನೀವು ಸತ್ಯವಂತರಾಗಿದ್ದರೆ ನಿಮ್ಮ ಮಾತು ಕೇಳಬಹುದಿತ್ತು. ನಿಮ್ಮ ಕಾಲದ ರೀ ಡೂಗೆ ನೀವು ಸಿದ್ದರಿದ್ದೀರಾ.?  ನಿಜವಾಗಲೂ ಸತ್ಯವಂತರಾಗಿದ್ದರೆ ಒಪ್ಪಿಕೊಳ್ಳಿ ಎಂದು  ಉಗ್ರಪ್ಪ, ಸಲೀಂ ಮಾತುಕತೆ ಉಲ್ಲೇಖಿಸಿ  ಡಿ ಕೆ ಶಿವಕುಮಾರ್ ಬಂದ ಮೇಲೆ ಜಾಸ್ತಿ ಆಯ್ತು ಅಂತ ಒಪ್ಪಿಕೊಂಡಿದ್ದಾರೆ ಎಂದರು.

ಸದನದಲ್ಲಿ ರಮೇಶ್ ಕುಮಾರ್ ಅವರು ಹೇಳಿದ ರೇಪ್ ಕುರಿತ ಮಾತಿನ ವಿಚಾರಕ್ಕೆ ಪ್ರತಿಕ್ರಿಯಿಸಿ  ರಮೇಶ್ ಕುಮಾರ್ ಸ್ಪೀಕರ್ ಆಗಿದ್ದವರು. ಯಾವ ವಿಚಾರ ಹೇಗೆ ಮಾತಾಡಬೇಕೆಂದು ಅರಿಯಬೇಕಿತ್ತು. ತಾನೇ ಮಹಾನ್ ಬುದ್ಧಿವಂತ ನಾನೇ ಪಂಡಿತ ಎಂದು ಬಿಂಬಿಸಿಕೊಳ್ಳುವ ರಮೇಶ್ ಕುಮಾರ್. ಎಂತಹ ಮನುಷ್ಯ ಎಂಬುದು ರಾಜ್ಯದ ಜನರ ಮುಂದೆ ಸಾಬೀತಾಗಿದೆ. ಅವರ ಎಲ್ಲಾ ಕಥೆಗಳು ಎಲ್ಲರಿಗೂ ಗೊತ್ತು.? ನಾನು ಆ ಕಥೆ ಹೇಳಿದರೆ, ನನ್ನನ್ನು ಹುಚ್ಚ ಅಂತ ಹೇಳುತ್ತಾರೆ. ಅವರ ಸಭ್ಯಸ್ಥಿಗೆ ನಿನ್ನೆ ಸದನದಲ್ಲಿ ಗೊತ್ತಾಗಿದೆ ಎಂದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: