ಕರ್ನಾಟಕಪ್ರಮುಖ ಸುದ್ದಿಮೈಸೂರು

ಬಿಬಿಎಂಪಿಗೆ ಮೈಸೂರು ಮಹಾನಗರ ಪಾಲಿಕೆಯ ತಂಡ ಭೇಟಿ

ಮೈಸೂರು, ಡಿ.19:- ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 61 ಕಂದಾಯ, ಬಡಾವಣೆಗಳಲ್ಲಿ ಸುಮಾರು 31 ಸಾವಿರ ಕಂದಾಯ ಆಸ್ತಿಗಳನ್ನು ಇವುಗಳಿಂದ ಆಸ್ತಿ ತೆರಿಗೆಯನ್ನು ಸಂಗ್ರಹಿಸಿ, ಈ ಬಡಾವಣೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಲುವಾಗಿ ಈ ಆಸ್ತಿಗಳ ದಾಖಲೆಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಅನುಷ್ಠಾನದಲ್ಲಿರುವಂತೆ ಮೈಸೂರು ಮಹಾನಗರ ಪಾಲಿಕೆಯಲ್ಲಿಯೂ ಸಹ ಬಿ-ರಿಜಿಸ್ಟರ್‌ ಅನ್ನು ಅನುಷ್ಠಾನಗೊಳಿಸುವ ಬಗ್ಗೆ  ಉಪ-ಮಹಾಪೌರರು  ಅನ್ವರ್ ಬೇಗ್(ಆಫ್ತಾಬ್) ಅವರು ಹಾಗೂ ತಂಡವು ಮಾಹಿತಿ ಪಡೆದುಕೊಂಡಿತು.

ಈ ವೇಳೆ ಮೈಸೂರು ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷರುಗಳು, ಸದಸ್ಯರುಗಳ ತಂಡ, ಬಿಬಿಎಂಪಿ ಕಂದಾಯ ವಿಭಾಗದ ಜಂಟಿ ಆಯುಕ್ತರು ವೆಂಕಟಾಚಲಪತಿ, ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತರು ಶಶಿಕುಮಾರ್ ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು. (ಕೆ.ಎಸ್,ಎಸ್. ಎಚ್)

Leave a Reply

comments

Related Articles

error: