ಮೈಸೂರು

ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಖಂಡಿಸಿ ಪ್ರತಿಭಟನೆ

ಮೈಸೂರು,ಡಿ.20:- ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದ ಪ್ರಕರಣ ಹಾಗೂ ಕೊಲ್ಲಾಪುರದಲ್ಲಿ ಕನ್ನಡ ಬಾವುಟ ಸುಟ್ಟು ಹಾಕಿರುವ ಪ್ರಕರಣವನ್ನು ಖಂಡಿಸಿ ಮೈಸೂರು ಸಮಾನ ಮನಸ್ಕರ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.

ಗಾಂಧಿ ಚೌಕದಲ್ಲಿಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದಿ.ಮೈಸೂರು ಕೋ-ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷ ಪಡುವಾರಹಳ್ಳಿ ಎಂ.ರಾಮಕೃಷ್ಣ, ನಿರ್ದೇಶಕರಾದ ರಾಜಕೀಯ ರವಿಕುಮಾರ್, ಜೆ.ಯೋಗೇಶ್ ಕುಮಾರ್ ಗೌಡ, ಪ್ರಶಾಂತ್, ಹರೀಶ್ ಕುಮಾರ್, ಎಸ್ ಆರ್.ರವಿಕುಮಾರ್, ಗಂಗ, ಸುರೇಂದ್ರ ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: