ಮೈಸೂರು

ನಿರಾಶ್ರಿತರು, ರಸ್ತೆ ಬದಿಯಲ್ಲಿ ಮಲಗುವ ನಿರ್ಗತಿಕರಿಗೆ ಹೊದಿಕೆ ವಿತರಣೆ

ಮೈಸೂರು,ಡಿ.20:- ಕೆ ಎಂಪಿಕೆ ಚಾರಿಟಬಲ್ ಟ್ರಸ್ಟ್ ಹಾಗೂ ಜೀವಧಾರ ರಕ್ತನಿಧಿ ಕೇಂದ್ರದ  ವತಿಯಿಂದ ಬೀದಿ ಬದಿಯಲ್ಲಿ ಜೀವನ ಸಾಗಿಸಿ ರಾತ್ರಿ ಹೊತ್ತು ರಸ್ತೆಯಲ್ಲಿ ಮಲಗುವ ನಿರ್ಗತಿಕರು, ಬೀದಿ ಬದಿ ವ್ಯಾಪಾರಸ್ಥರು ಹಾಗೂ ಬಡ ವರ್ಗದವರಿಗೆ ಮತ್ತು ಆದಿ ಜನಾಂಗದವರಿಗೆ ಚಳಿಗಾಲ ಹಾಗೂ ವಿಪರೀತ ತಂಡೀಗಾಳಿ ವಾತಾವರಣದ ಪರಿಣಾಮ ಆರೋಗ್ಯ ಸಮಸ್ಯೆ ಬರದಂತೆ “ಹೊದಿಕೆ ವಿತರಣಾ ಅಭಿಯಾನ’ಕ್ಕೆ ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಬಿಜೆಪಿ ನಗರಾಧ್ಯಕ್ಷ ಟಿ ಎಸ್ ಶ್ರೀವತ್ಸ ಅವರು ನಿರಾಶ್ರಿತರಿಗೆ ಹೊದಿಕೆ ನೀಡುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು  ರಾಜ್ಯ ಸರ್ಕಾರ ಬೀದಿ ಬದಿ ವ್ಯಾಪರಸ್ಥರು, ನಿರಾಶ್ರಿತರಿಗೆ ಹಲವಾರು ಯೋಜನೆಗಳನ್ನು ನೀಡಿದೆ. ಅದನ್ನು ಉಪಯೋಗ ಮಾಡಿಕೊಳ್ಳಲು ಮುಂದಾಗಬೇಕು ಎಂದರು.

ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ ಮಾತನಾಡಿ ಸರ್ಕಾರಗಳು ಹಲವಾರು ಯೋಜನೆಗಳನ್ನು ಬೀದಿಬದಿ ವ್ಯಾಪಾರಸ್ಥರಿಗೆ, ಅಶಕ್ತರಿಗೆ, ನಿರಾಶ್ರಿತರ ನೆರವಿಗೆ ತಂದರೂ ಸಹ ಸಮರ್ಪಕವಾಗಿ ತಲಪುತ್ತಿಲ್ಲ. ಇತ್ತ ಸಂಬಂಧಪಟ್ಟ ಅಧಿಕಾರಿಗಳು ಫಲಾನುಭವಿಗಳಿಗೆ ತಲುಪುವವರೆಗೂ ಶ್ರಮಿಸಬೇಕು. ನಗರ ಮಟ್ಟದಲ್ಲಿ ನಿರ್ಮಿತಿ ಕೇಂದ್ರಗಳು ಕೇವಲ ಬಂದಿಖಾನೆ ಎಂಬ ಕಲ್ಪನೆ ನಿರಾಶ್ರಿತರಲ್ಲಿ ಬರಬಾರದು. ಅದೊಂದು ಮನಃಪರಿವರ್ತನ ಕೇಂದ್ರವಾಗಿ ಕಾಣುವ ಮಟ್ಟದಲ್ಲಿ ಯೋಜನೆಗಳನ್ನು ರೂಪಿಸಬೇಕಿದೆ ಎಂದರು.

ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಎಲ್ ಆರ್ ಮಹಾದೇವಸ್ವಾಮಿ ಮಾತನಾಡಿ ನಮ್ಮ ಮೈಸೂರಲ್ಲಿ ನಿರಾಶ್ರಿತರು ಅಶಕ್ತರಲ್ಲಿ ಸ್ವಾಭಿಮಾನಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದ ಕಾರಣ ಕಷ್ಟದಲ್ಲಿದ್ದೇವೆ ಸಹಾಯ ಮಾಡಿ ಎಂದು ಸಂಘಸಂಸ್ಥಗಳಿಗೆ ಅಥವಾ ಸರ್ಕಾರಕ್ಕೆ ಅರ್ಜಿ ಹಾಕಲ್ಲ ಅಥವಾ ಸರ್ಕಾರದವರೇ ಎಲ್ಲವನ್ನು ಸರಿದಾರಿಗೆ ತರಲು ಸಾಧ್ಯವಿಲ್ಲ .ಸಮಾಜವನ್ನು  ಸರಿಪಡಿಸಲು ಸಂಘ ಸಂಸ್ಥೆಗಳ ಮತ್ತು ಸಾರ್ವಜನಿಕರ ಪಾತ್ರ ಬಹಳಮುಖ್ಯ, ಅಶಕ್ತರಿರುವ ಸ್ಥಳಕ್ಕೆ ಹೋಗಿ ಹೊದಿಕೆ ವಿತರಣೆ ಕಾರ್ಯಕ್ರಮ ನಡೆಯುವ ಮಾದರಿಯಲ್ಲೇ ಅವರಿಗೆ ಆರೋಗ್ಯ ತಪಾಸಣೆ ಮಾಡಿಸಲು ಶ್ರಮಿಸೋಣ ಎಂದರು.

ಈ ಸಂದರ್ಭ   ಬಿಜೆಪಿ ರಾಜ್ಯ ವಕ್ತಾರ ಎಂ ಜೆ ಮಹೇಶ್ , ಮಾಜಿ ನಗರ ಪಾಲಿಕಾ ಸದಸ್ಯರಾದ ಎಂ ಕೆ ಶಂಕರ್ ,ಉಮೇಶ್  ಮುಡಾ ಸದಸ್ಯರಾದ ಲಕ್ಷ್ಮೀದೇವಿ ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ನಿಗಮ ಮಂಡಳಿ ರಾಜ್ಯ ನಿರ್ದೇಶಕಿ ರೇಣುಕರಾಜ , ಹಿಂದುಳಿದ ವರ್ಗದ ಅಧ್ಯಕ್ಷ ಜೋಗಿ ಮಂಜು ,ಕೆ ಆರ್ ಎಸ್ ಜಿಲ್ಲಾ ಪಂಚಾಯತ್ ಸದಸ್ಯರಾದ ವಿಜಯ್ ಕುಮಾರ್ ,ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ ,ಜೀವಧಾರ ರಕ್ತನಿಧಿ ಕೇಂದ್ರದ ಗಿರೀಶ್ ,ಅಪೂರ್ವ ಸುರೇಶ್ ,ಕೆಎಂಪಿಕೆ ಟ್ರಸ್ಟ್ ನ ಅಧ್ಯಕ್ಷರಾದ ವಿಕ್ರಂ ಅಯ್ಯಂಗಾರ್ ,ಅಜಯ್ ಶಾಸ್ತ್ರಿ ,ಎಸ್ ಎನ್ ರಾಜೇಶ್, ಮಹೇಂದ್ರ ಶೈವ ,ರಾಕೇಶ್ ಕುಂಚಿಟಿಗ ,ಸುಚೀಂದ್ರ   ಇನ್ನಿತರರು ಹಾಜರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: