ಮೈಸೂರು

ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ದಾಳಿ : ಇಬ್ಬರು ಮಹಿಳೆಯರ ರಕ್ಷಣೆ

ಮೈಸೂರು, ಡಿ.21:- ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯೊಂದರ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಓರ್ವರನ್ನು ಬಂಧಿಸಿ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.

ಮೈಸೂರು ನಗರ ಸಿ.ಸಿ.ಬಿ. ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ, 19/12/2021 ರಂದು ಮೈಸೂರು ನಗರ ಉದಯಗಿರಿ ಪೊಲೀಸ್ ಠಾಣಾ ಸರಹದ್ದು ಗಾಯಿತ್ರಿಪುರಂ
2ನೇ ಹಂತ, ಚರ್ಚ್ ಹತ್ತಿರ ಇರುವ ಭೈರವೇಶ್ವರ ನಿಲಯ ಮನೆ ನಂ: 18ರ ಮೇಲೆ ದಾಳಿ ಮಾಡಿ, ಈ ಮನೆಯಲ್ಲಿ ಮಹಿಳೆಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಒಬ್ಬ ಮಹಿಳೆಯನ್ನು ಬಂಧಿಸಿದ್ದು, ವೇಶ್ಯಾವಾಟಿಕೆಯಿಂದ ಸಂಪಾದನೆ ಮಾಡಿದ್ದ, 2,474ರೂ.ಗಳನ್ನು ಅಮಾನತ್ತುಪಡಿಸಿಕೊಂಡಿದ್ದು, ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಡಿ.ಸಿ.ಪಿ ಗೀತಪ್ರಸನ್ನ ಮಾರ್ಗದರ್ಶನದಲ್ಲಿ ಸಿ.ಸಿ.ಬಿ. ಘಟಕದ ಎ.ಸಿ.ಪಿ.ರವರಾದ ಸಿ.ಕೆ. ಅಶ್ವಥ್‍ ನಾರಾಯಣರವರ ನೇತೃತ್ವದಲ್ಲಿ ಸಿ.ಸಿ.ಬಿ.ಯ ಇನ್ಸ ಪೆಕ್ಟರ್, ಮಲ್ಲೇಶ್, ಉದಯಗಿರಿ ಠಾಣೆಯ ಇನ್ಸ ಪೆಕ್ಟರ್ ರಾಜು, ಸಬ್ ಇನ್ಸ ಪೆಕ್ಟರ್ ಸುನಿಲ್ ಕುಮಾರ್, ಸಿಬ್ಬಂದಿಗಳಾದ ಪುರುಷೋತ್ತಮ, ಶ್ರೀನಿವಾಸ, ಆನಂದ, ಶಾಜಿಯಾಬಾನು, ಸುಮಿತ್ರ
ರವರು ನಡೆಸಿರುತ್ತಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: