ಕರ್ನಾಟಕಪ್ರಮುಖ ಸುದ್ದಿ

ವೀಕೆಂಡ್ ಕರ್ಫ್ಯೂ ವೇಳೆ ಕಾನೂನು ಉಲ್ಲಂಘಿಸಿದಲ್ಲಿ ಕೇಸ್ ; ಎಸ್.ಪಿ. ಕೋನ ವಂಶೀಕೃಷ್ಣ

ರಾಜ್ಯ(ಬೆಂಗಳೂರು),ಜ.5 : -ಕೊರೊನಾ ಮೂರನೇ ಅಲೆಯ ಆತಂಕದ ಹಿನ್ನಲೆ ಯಲ್ಲಿ  ಕೊರೊನಾ ನಿಯಂತ್ರಣಕ್ಕೆ  ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಈಗಾಗಲೇ ಜಾರಿಗೆ ತಂದಿದ್ದು, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕೂಡ ಕಾನೂನು ಕ್ರಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಸಿಬ್ಬಂದಿಗಳ ನಿಯೋಜನೆ, ಭದ್ರತೆ ಎಲ್ಲಾ ರೀತಿಯ ತಯಾರಿ ನಡೆಸಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್.ಪಿ. ಕೋನ ವಂಶೀಕೃಷ್ಣ ಹೇಳಿದ್ದಾರೆ.

ಈ ಬಗ್ಗೆ ನೆಲಮಂಗಲದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾನೂನು ಉಲ್ಲಂಘನೆ ಮಾಡುವವರಿಗೆ ಖಡಕ್ ವಾರ್ನಿಂಗ್ ನೀಡಿದ್ದೇವೆ. ವೀಕೆಂಡ್ ಕರ್ಫ್ಯೂ ಉಲ್ಲಂಘನೆ ಮಾಡಿದರೆ ಕಟ್ಟುನಿಟ್ಟಿನ ಕ್ರಮ ಜಾರಿಗೆ ತರಲಾಗಿದೆ, ಕಾನೂನು ಮೀರಿದರೆ ನಿಮ್ಮ ಮೇಲೆ ಕೇಸ್ ಬೀಳುತ್ತೆ ಹಾಗೂ NDMA ಆಕ್ಟ್ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗುತ್ತದೆ. ಜನರು ಮಾಸ್ಕ್ ಮತ್ತು ಸಾಮಾಜಿಕ ಅಂತರ ಪಾಲನೆ ಕಡ್ಡಾಯವಾಗಿ ಮಾಡಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ಎಲ್ಲಾ ಚೆಕ್ ಪೋಸ್ಟ್ ಗಳಲ್ಲೂ ಕಟ್ಟುನಿಟ್ಟಿನ ಪೊಲೀಸ್ ಭದ್ರತೆ ಜೊತೆಗೆ ವಿಡಿಯೋ ಕವರೇಜ್ ಮಾಡಲಾಗುತ್ತದೆ. ವೀಕೆಂಡ್ ಕರ್ಫ್ಯೂ ವೇಳೆ ತುರ್ತು ಸೇವೆಗೆ ಮಾತ್ರ ಅವಕಾಶ ಇರುತ್ತದೆ.  ಜೊತೆಗೆ ಸೂಕ್ತ ದಾಖಲಾತಿ ಹೊಂದಿದವವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದು ಹೇಳಿದ್ದಾರೆ.(ಎಸ್.ಎಂ)

Leave a Reply

comments

Related Articles

error: