Uncategorizedಮೈಸೂರು

ರಾಷ್ಟ್ರ ಮಟ್ಟದ ಕಾರ್ಯಾಗಾರ: ಮೇ 11 ಮತ್ತು 12 ರಂದು

ಮೈಸೂರು, ಮೇ 8: ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಸಂಸ್ಥೆಯ ವತಿಯಿಂದ ಮೇ 11 ಮತ್ತು 12 ರಂದು ‘ಇಟಿ-17’ ಹೆಸರಿನಲ್ಲಿ ಎರಡು ದಿನಗಳ ರಾಷ್ಟ್ರ ಮಟ್ಟದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಡಾ.ಎಂ.ಎ.ಬಾಲಸುಬ್ರಮಣ್ಯ ತಿಳಿಸಿದರು.

ಸೋಮವಾರ ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಾಗಾರವು ಮುಖ್ಯ  ಭಾಗೀದಾರರಾದ ಕರ್ನಾಟಕ ಸರ್ಕಾರ, ವಿಜ್ಞಾನ್ ಪ್ರಸಾರ್, ವಿಜ್ಞಾನ ಭಾರತಿ, ಇಸ್ರೋ ಮತ್ತು ಎಕ್ಸೆಲ್ ಸಾಫ್ಟ್ ಟೆಕ್ನಾಲಾಜೀಸ್ ಸಹಯೋಗದೊಂದಿಗೆ ನಡೆಯುತ್ತದೆ. ಶಿಕ್ಷಣದಲ್ಲಿ ತಂತ್ರಜ್ಞಾನದ ಬಳಕೆ, ಆಚರಣೆಗಳು ಮತ್ತು ಸಾಧ್ಯತೆಗಳ ಕುರಿತಾಗಿ ಚರ್ಚಿಸಲಾಗುತ್ತದೆ. ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ (ಐಸಿಟಿ) ವನ್ನು ಶಿಕ್ಷಣದಲ್ಲಿ ಅಳವಡಿಸುವ ಬಗ್ಗೆ ಹಲವಾರು ಭಿನ್ನಾಭಿಪ್ರಾಯಗಳಿದ್ದು, ಆ ಗೊಂದಲಗಳಿಗೆ ಈ ಕಾರ್ಯಾಗಾರ ಉತ್ತಮ ವೇದಿಕೆಯಾಗಲಿದೆ ಎಂದರು.

ಈ ಕಾರ್ಯಾಗಾರವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಉದ್ಘಾಟಿಸಲಿದ್ದಾರೆ.  50 ಕ್ಕೂ ಹೆಚ್ಚು ರಾಷ್ಟ್ರಮಟ್ಟದ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷ  ಡಾ.ಕಸ್ತೂರಿ ರಂಗನ್, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಸುಭಾಷ್ ಚಂದ್ರ ಕುಂಟಿಯಾ ಉಪಸ್ಥಿತರಿರುತ್ತಾರೆ. ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭವಿರುತ್ತದೆ ಎಂದು ತಿಳಿಸಿದರು.

ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು www.et-17.com ಗೆ ಭೇಟಿ ನೀಡಿ. ಹೆಚ್ಚಿನ ಮಾಹಿತಿಗಾಗಿ  9591945162, 9900094271 ಗೆ ಸಂಪರ್ಕಿಸಬಹುದಾಗಿದೆ. ನೋಂದಣಿ ಶುಲ್ಕ ವಿದ್ಯಾರ್ಥಿಗಳಿಗೆ 750 ರೂ. ಮತ್ತು ಉಳಿದವರಿಗೆ 1500 ರೂ.ಇರುತ್ತದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಜಂಟಿ ಕಾರ್ಯದರ್ಶಿ ಪ್ರವೀಣ್ ಕುಮಾರ್ ಹಾಜರಿದ್ದರು. (ವರದಿ: ಎಲ್.ಜಿ)

Leave a Reply

comments

Related Articles

error: