ಮೈಸೂರು

ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಹಾಲುಮತ ಮಹಾಸಭಾ

ಮೈಸೂರು, ಮೇ 8 : ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ನಡೆದ ಕುರುಬರ ಸಮಾವೇಶದಲ್ಲಿ  ಹಾಲುಮತ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು, ಶಿಫಾರಸ್ಸು ಮಾಡಲು ಹಲವಾರು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿತ್ತು. ನಂತರ ಮಹಾಸಭಾವು ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಸೇರಿದಂತೆ ಹಲವು ಸಚಿವರು ಹಾಗೂ ವಿರೋಧ ಪಕ್ಷ ನಾಯಕರನ್ನು ಭೇಟಿ ಮಾಡಿ ಚರ್ಚಿಸಿದಾಗ ಪರಿಶೀಲಿಸುವ ಭರವಸೆ ಸಿಕ್ಕಿತ್ತು. ಮಹಾಸಭಾ ಹಾಗೂ ಇನ್ನಿತರ ಸಮಾನ ಮನಸ್ಕ ಸಂಘಟನೆಗಳ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದ್ಯ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿರುವ ಹಾಲುಮತ ಸಮುದಾಯವನ್ನು ಎಸ್.ಟಿ.ಗೆ ಸೇರಿಸಲು ಶಿಫಾರಸ್ಸು ಮಾಡಿ ಕೇಂದ್ರಕ್ಕೆ ಕಳಿಸುವ ಅವರ ನಿರ್ಧಾರವನ್ನು ಹಾಲುಮತ ಮಹಾಸಭಾ ಗೌರವದಿಂದ ಸ್ವಾಗತಿಸಿ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತದೆ ಎಂದು ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ತಿಳಿಸಿದರು.

ಸೋಮವಾರ ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಡಿಮೆ ಜನಸಾಂದ್ರತೆಯಿರುವ ಕೊಡಗು ಜಿಲ್ಲೆಯಲ್ಲಿ ಹಾಲುಮತ ಸಮಾಜದವರು ಇರುವುದು ಕಡಿಮೆ. ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ, ಶೈಕ್ಷಣಿಕವಾಗಿ ತುಂಬಾ ಹಿಂದುಳಿದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಸಾಮಾಜಿಕ ನ್ಯಾಯದ ತತ್ವದಡಿಯಲ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಇದನ್ನು ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ವಿಜಯಕುಮಾರ್ ಬಿನ್ ಮಹಾಲಿಂಗಯ್ಯ ಅವರನ್ನು ಹಾಲುಮತ ಮಹಾಸಭಾದ ಜಿಲ್ಲಾಧ್ಯಕ್ಷರನ್ನಾಗಿ ಸ್ವೀಕರಿಸಿ ಗೌರವಿಸಿದರು.

ಸುದ್ದಿಗೋಷ್ಠಿಯಲ್ಲಿ ಮಹಾಸಭಾದ ಪದಾಧಿಕಾರಿಗಳಾದ  ನವೀನ್, ತಿಮ್ಮೇಗೌಡ ಹಾಗೂ ವಿಜಯಕುಮಾರ್ ಹಾಜರಿದ್ದರು. (ವರದಿ: ಎಲ್.ಜಿ)

 

Leave a Reply

comments

Related Articles

error: