ಕರ್ನಾಟಕಪ್ರಮುಖ ಸುದ್ದಿ

ಇಂದು ಸಿಎಂ ನೇತೃತ್ವದಲ್ಲಿ ಸಭೆ : ಕಟ್ಟುನಿಟ್ಟಿನ ಕ್ರಮಗಳ ಮುಂದುವರಿಕೆ ಬಗ್ಗೆ ಚರ್ಚೆ ; ಆರೋಗ್ಯ ಸಚಿವ ಡಾ.ಸುಧಾಕರ್

ರಾಜ್ಯ(ಬೆಂಗಳೂರು),ಜ.17 :-  ಈ ದಿನ ನಡೆಯುವ ಸಭೆಯಲ್ಲಿ  ಎಷ್ಟು ಹೊಸ ಪ್ರಕರಣಗಳು ದಾಖಲಾಗುತ್ತಿದೆ.  ಮಕ್ಕಳ ಮೇಲೆ ಹೇಗೆ ಪ್ರಭಾವ ಬೀರುತ್ತಿದೆ.  ಈ ಎಲ್ಲ ವಿಚಾರಗಳ ಬಗ್ಗೆ ಮುಖ್ಯಮಂತ್ರಿಗಳು ಮತ್ತು ತಜ್ಞರು ಚರ್ಚೆ ನಡೆಸಲಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾಧ್ಯಮಗಳೊಂದಿಗೆ ಮಾತನಾಡಿ  ಇಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೊರೊನಾ ಮೂರನೇ ಅಲೆ   ಕುರಿತಂತೆ ಸಭೆ ನಡೆಯಲಿದೆ. ರಾಜ್ಯದಲ್ಲಿ ಈಗ ಕೋವಿಡ್ ಕ್ರಮಗಳ  ಮುಂದುವರಿಕೆಯ ಬಗ್ಗೆಯೂ ಚರ್ಚೆ ನಡೆಯುತ್ತದೆ. ಚರ್ಚೆಯಲ್ಲಿ ತಜ್ಞರು ಮತ್ತು ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟ ಹೇಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸಭೆಯ ಬಳಿಕ ತಿಳಿಸುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ  ನೆಗಡಿ,ಕೆಮ್ಮು,ಶೀತ ಲಕ್ಷಣಗಳು ಹೆಚ್ಚಾಗಿ ಕಾಣುತ್ತಿರುವುದರ ಬಗ್ಗೆ ಯಾರೂ ಕೂಡ ಭಯ ಪಡುವ ಅಗತ್ಯವಿಲ್ಲ.  ಯಾಕೆಂದರೆ ಈ ಸಮಯದಲ್ಲಿ ಆ ರೀತಿಯ ಲಕ್ಷಣಗಳು ಕಂಡು ಬರುವುದು ಹೆಚ್ಚು. ಅತಿ ಹೆಚ್ಚಾಗಿ ಸೋಂಕಿನ ಲಕ್ಷಣಗಳು ಕಂಡು ಬರುವವರು ಕೋವಿಡ್ ಪರೀಕ್ಷೆ ಮಾಡಿಸಿ ಎಂದು ಹೇಳಿದ್ದಾರೆ. (ಎಸ್.ಎಂ)

Leave a Reply

comments

Related Articles

error: