ಕರ್ನಾಟಕಪ್ರಮುಖ ಸುದ್ದಿ

ಎಂ.ಪಿ. ರೇಣುಕಾಚಾರ್ಯ ಅವರ ಪ್ರವಾಸ ಕಾರ್ಯಕ್ರಮ

ರಾಜ್ಯ(ದಾವಣಗೆರೆ) ಜ. 18 :- ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕರಾದ ಎಂ.ಪಿ. ರೇಣುಕಾಚಾರ್ಯ ಅವರು ಜ. 18 ರಂದು ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಜ.18 ರಂದು ಬೆಳಿಗ್ಗೆ 10 ಗಂಟೆಗೆ ಹೊನ್ನಾಳಿಯಲ್ಲಿನ ದುರ್ಗಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡುವರು. 11 ಗಂಟೆಗೆ ಹೊನ್ನಾಳಿ ತಾಲ್ಲೂಕು ಪಂಚಾಯಿತಿಯ ಸಾಮಥ್ರ್ಯ ಸೌಧದಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ಅಧಿಕಾರಿಗಳೊಂದಿಗೆ ಕೋವಿಡ್ ಸಾಂಕ್ರಾಮಿಕ ನಿಯಂತ್ರಣ ಕುರಿತಂತೆ ಸಭೆ ನಡೆಸುವರು. ಮಧ್ಯಾಹ್ನ 12.15 ಕ್ಕೆ ಹೊನ್ನಾಳಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡುವರು. ಮಧ್ಯಾಹ್ನ 01 ಗಂಟೆಗೆ ನ್ಯಾಮತಿ ಪಟ್ಟಣ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕಛೇರಿಗಳಿಗೆ ಭೇಟಿ ನೀಡುವರು. ಮ. 02 ಗಂಟೆಗೆ ಅರಬಗಟ್ಟೆ ಗ್ರಾಮದಲ್ಲಿರುವ ವಸತಿ ಶಾಲೆಗೆ ಭೇಟಿ ನೀಡುವರು. ಮಧ್ಯಾಹ್ನ 2.45 ಕ್ಕೆ ಹೊನ್ನಾಳಿಗೆ ಆಗಮಿಸಿ, ಮಧ್ಯಾಹ್ನ 03 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: