ಕರ್ನಾಟಕಮೈಸೂರು

ಮುಂದಿನ ಮುಖ್ಯಮಂತ್ರಿಗಳು ಸಿದ್ದರಾಮಯ್ಯನವರೇ ಆಗಲಿ

 ಮಂಡ್ಯ, ಮೇ 8:  ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಜೆಡಿಎಸ್ ಬಂಡಾಯ ಶಾಸಕ ಎನ್. ಚಲುವರಾಯಸ್ವಾಮಿ ಆಶಿಸಿದ್ದಾರೆ. ಮಂಡ್ಯ ತಾಲೂಕಿನ ಕೋಡಿಕೊಪ್ಪಲು ಗ್ರಾಮದ ದೇವಸ್ಥಾನ ಉದ್ಘಾಟನಾ ಸಮಾರಂಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.
ಜೆಡಿಎಸ್ ಬಂಡಾಯ ಶಾಸಕರನ್ನು ಕಾಂಗ್ರೆಸ್ ಗೆ ಸೇರಿಸಿಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯ ತಾಲೂಕಿನ ತಿರುಮಲಪುರದಲ್ಲಿ ಮಾತನಾಡಿದ ಅವರು, ಮುಂದೆ ನಮ್ಮ ಸರ್ಕಾರ ಬರಲು ಶಾಸಕರು, ಸಚಿವರ ಜೊತೆ ಚರ್ಚೆ ಮಾಡಲಾಗುತ್ತಿದೆ. ಅಲ್ಲದೇ ಮುಂದಿನ ಚುನಾವಣೆ ಕುರಿತು ಚರ್ಚಿಸಲಾಗುತ್ತಿದೆ ಎಂದು ಹೇಳಿದ್ದಾರೆ. (ವರದಿ: ಎಸ್.ಎನ್.ಎಲ್.ಜಿ)

 

Leave a Reply

comments

Related Articles

error: