ಮೈಸೂರು

ಜ.24ರಂದು ವಸತಿ ಸಚಿವ ವಿ.ಸೋಮಣ್ಣ ಮೈಸೂರು ಪ್ರವಾಸ

ಮೈಸೂರು,ಜ.19:-ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಅವರು ಜ.24ರಂದು ಮೈಸೂರು ಪ್ರವಾಸ ಕೈಗೊಂಡಿದ್ದಾರೆ.

ಅಂದು ಬೆಳಗ್ಗೆ 9 ಗಂಟೆಗೆ ಮೈಸೂರಿಗೆ ಆಗಮಿಸುವ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯುವರು. ಬಳಿಕ 9.30 ಕ್ಕೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಲಿದ್ದು,. ಬೆಳಗ್ಗೆ 10 ಗಂಟೆಗೆ ದಟ್ಟಗಳ್ಳಿ ಹೊರವರ್ತುಲ ರಸ್ತೆಯಲ್ಲಿರುವ ಸಾರಾ ಕನ್ವೆನ್ಸನ್ ಹಾಲ್‌ ನಲ್ಲಿ ನಡೆಯಲಿರುವ ಮಾಜಿ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರ ಪುತ್ರಿಯ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಳಿಗ್ಗೆ 10.30ಕ್ಕೆ ಕೃಷ್ಣಾ ವಿಲಾಸ ರಸ್ತೆಯಲ್ಲಿರುವ ಕೆ.ವಿ.ಸಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿ, ಬಳಿಕ  ಬೆಳಗ್ಗೆ 11.30 ಕ್ಕೆ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ವಸತಿ ಇಲಾಖೆ ವತಿಯಿಂದ ರಾಜ್ಯ ಪುರಸ್ಕೃತ ಯೋಜನೆಯಡಿ ನೀಡಲಾದ ಗುರಿಗೆ ಎದುರಾಗಿ ಫಲಾನುಭವಿಗಳ ಆಯ್ಕೆಗೆ ಸಂಬಂಧಿಸಿದಂತೆ ಹಾಗೂ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆ ಗಳ ಅನುಷ್ಠಾನ ಮತ್ತು ಅಭಿವೃದ್ಧಿ ಕಾಮಗಾರಿಗಳ ಕುರಿತಂತೆ ಜಿಲ್ಲೆಯ ಸಂಸದರು, ಶಾಸಕರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇತರೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ ಕೇಂದ್ರಸ್ಥಾನಕ್ಕೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

comments

Related Articles

error: