ಕರ್ನಾಟಕಪ್ರಮುಖ ಸುದ್ದಿ

ಜ.20 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ರಾಜ್ಯ(ಮಡಿಕೇರಿ )ಜ.19:-ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೆಡ್ ರಿಬ್ಬನ್, ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನಾ ಘಟಕ, ಆಂತರಿಕ ಗುಣಮಟ್ಟ ಭರವಸಾ ಕೋಶ, ರೇಂಜರ್ಸ್- ರೋವರ್ಸ್, ಕ್ರೀಡಾ ಸಮಿತಿ, ಸಾಂಸ್ಕೃತಿಕ ಸಮಿತಿ, ಹೆರಿಟೇಜ್ ಕ್ಲಬ್ ಇವರ ಸಹಯೋಗದಲ್ಲಿ ಯುವ ಸಪ್ತಾಹದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಜನವರಿ, 20 ರಂದು ಬೆಳಗ್ಗೆ 10.30 ಗಂಟೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಪ್ರಾಂಶುಪಾಲರಾದ ಪ್ರೊ.ಚಿತ್ರಾ ವೈ., ಕೊಡಗು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ರಕ್ತನಿಧಿ ಅಧಿಕಾರಿ ಮತ್ತು ಪ್ರಾಧ್ಯಾಪಕರಾದ ಡಾ.ಕರುಂಬಯ್ಯ, ಭಾರತೀಯ ರೆಡ್‍ಕ್ರಾಸ್ ಸೊಸೈಟಿಯ ಸಭಾಪತಿ ಬಿ.ಕೆ.ರವೀಂದ್ರ ರೈ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ.ಕೆ.ಸಿ.ದಯಾನಂದ, ಇತರರು ಪಾಲ್ಗೊಳ್ಳಲಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: