
ಮೈಸೂರು
ರಾಷ್ಟ್ರೀಯ ರಸ್ತೆ ಬದಿ ವ್ಯಾಪಾರಿಗಳ ದಿನಾಚರಣೆ ಅಂಗವಾಗಿ ಹೊದಿಕೆ ವಿತರಣೆ
ಮೈಸೂರು,ಜ.20:- ರಾಷ್ಟ್ರೀಯ ರಸ್ತೆ ಬದಿ ವ್ಯಾಪಾರಿಗಳ ದಿನಾಚರಣೆ ಅಂಗವಾಗಿ ನಂಜುಮಳಿಗೆಯಲ್ಲಿ ರಸ್ತೆ ಬದಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗಳಿಗೆ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ಹಾಗೂ ಜೀವಧಾರ ರಕ್ತನಿಧಿ ಕೇಂದ್ರ ವತಿಯಿಂದ ಹೊದಿಕೆ ಹಾಗೂ ಸ್ವೆಟರ್ ವಿತರಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸಿ. ಜೆ. ಗಂಗಾಧರ್ ಕೊರೋನಾ ಸೋಂಕು ಹರಡದಂತೆ ಅಗತ್ಯ ಮುಜಾಗ್ರತೆಗಳನ್ನು ಎಲ್ಲರೂ ಅನುಸರಿಸಬೇಕು. ಕೊರೋನಾದಿಂದಾಗಿ ಎಲ್ಲರ ಆರ್ಥಿಕ ಸ್ಥಿತಿ ಹದಗೆಟ್ಟಿದೆ, ಸರ್ಕಾರ ಸೌಲಭ್ಯಗಳನ್ನು ಪಡೆದು ಎಲ್ಲರೂ ಚೇತರಿಸಿಕೊಳ್ಳಿ. ಧೂಳು, ಗಾಳಿ,ಮಳೆ,ಬಿಸಿಲಿಗೆ ಮೈ ಒಡ್ಡಿ ದುಡಿಯುವ ಕಾರ್ಮಿಕರಾಗಿದ್ದು,ಮಕ್ಕಳ ವಿದ್ಯಾಭ್ಯಾಸ ಹಾಗೂ ವೈಯುಕ್ತಿಕ ಆರೋಗ್ಯದ ಕಡೆ ಹೆಚ್ಚು ಒತ್ತು ನೀಡಿ ಎಂದರು. ರಸ್ತೆ ಬದಿ ವ್ಯಾಪಾರಿಗಳು ಸುರಕ್ಷತೆ ಹಾಗೂ ಆರೋಗ್ಯದ ಕಡೆ ನಿಗಾ ವಹಿಸಬೇಕು. ಪಾದಚಾರಿಗಳಿಗೆ ವಾಹನ ಸವಾರರಿಗೆ ಅಡಚಣೆಯಾಗದಂತೆ ವ್ಯಾಪಾರ ವಹಿವಾಟು ಮಾಡಬೇಕು. ರಸ್ತೆ ನಿಯಮಗಳನ್ನು ಎಲ್ಲರೂ ಪಾಲಿಸಿದಲ್ಲಿ ಎಲ್ಲರಿಗೂ ಒಳಿತಾಗಲಿದೆ. ಬೀದಿ ಬದಿ ವ್ಯಾಪಾರಸ್ಥರು ಸ್ವಾವಲಂಬಿಗಳಾಗಿದ್ದಾರೆ. ಸರ್ಕಾರದ ಸೌಕರ್ಯಗಳನ್ನು ಹೊಂದಿ ಮಕ್ಕಳ ಶೈಕ್ಷಣಿಕಾಭಿವೃದ್ಧಿ ಕಡೆ ಒತ್ತು ಕೊಡಬೇಕು ಎಂದು ತಿಳಿಸಿದರು.
ಸರ್ಕಾರ ನೀಡುವ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ರಸ್ತೆ ಬದಿ ವ್ಯಾಪಾರಿಗಳು ಸಂಘಟನಾತ್ಮಕವಾಗಿ ಮುಂದುವರಿಯಬೇಕು ಎಂದು ಹೇಳಿದರು.
ಈ ಸಂದರ್ಭಮುಡಾ ಸದಸ್ಯರಾದ ಲಕ್ಷ್ಮೀದೇವಿ ,ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ,ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ ,ನವೀನ್ ಕೆಂಪಿ, ಸುಚೀಂದ್ರ ಇನ್ನಿತರರು ಹಾಜರಿದ್ದರು. (ಕೆ.ಎಸ್,ಎಸ್.ಎಚ್)