ದೇಶಪ್ರಮುಖ ಸುದ್ದಿ

ಮತ್ತೊಮ್ಮೆ ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ಹೊರ ಹೊಮ್ಮಿದ ಭಾರತದ ಪ್ರಧಾನಿ ನರೇಂದ್ರ ಮೋದಿ

ದೇಶ(ನವದೆಹಲಿ),ಜ.21:- ದೇಶದಲ್ಲಿ ಮಾರಣಾಂತಿಕ ಕೊರೊನಾ ವೈರಸ್‌ ನ ಮೂರನೇ ಅಲೆಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ಆಯ್ಕೆಯಾಗಿದ್ದಾರೆ.
ಅಮೆರಿಕದ ದತ್ತಾಂಶ ಗುಪ್ತಚರ ಸಂಸ್ಥೆ ‘ದಿ ಮಾರ್ನಿಂಗ್ ಕನ್ಸಲ್ಟ್’ ನಡೆಸಿದ ಸಮೀಕ್ಷೆಯ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರು ಅಪ್ರೂವಲ್ ರೇಟಿಂಗ್‌ ನಲ್ಲಿ ಯುಎಸ್ ಅಧ್ಯಕ್ಷ ಜೋ ಬಿಡನ್ ಮತ್ತು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸೇರಿದಂತೆ ವಿಶ್ವದ 13 ರಾಷ್ಟ್ರಗಳ ಮುಖ್ಯಸ್ಥರನ್ನು ಹಿಂದಿಕ್ಕಿದ್ದಾರೆ.
ಸಮೀಕ್ಷೆಯಲ್ಲಿ ಪ್ರಧಾನಿ ಮೋದಿಯವರ ಅಪ್ರೂವಲ್ ರೇಟಿಂಗ್ 71% ಆಗಿದೆ. ಜನವರಿ 13 ಮತ್ತು 19 ರ ನಡುವೆ ನಡೆದ ಈ ಸಮೀಕ್ಷೆಯಲ್ಲಿ ಭಾರತದ ಪ್ರಧಾನಿ ವಿಶ್ವದ ಅನೇಕ ಅಧ್ಯಕ್ಷರು ಮತ್ತು ಪ್ರಧಾನ ಮಂತ್ರಿಗಳಿಗಿಂತ ಬಹಳ ಮುಂದಿದ್ದಾರೆ. ಜನಪ್ರಿಯತೆಯ ಗ್ರಾಫ್‌ ನಲ್ಲಿ ಮೆಕ್ಸಿಕನ್ ಅಧ್ಯಕ್ಷ ಆಂಡ್ರೆ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್, ಇಟಾಲಿಯನ್ ಪ್ರಧಾನಿ ಮಾರಿಯೋ ಡ್ರಾಗಿ, ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್, ಯುಎಸ್ ಅಧ್ಯಕ್ಷ ಜೋ ಬಿಡೆನ್ ಸೇರಿದಂತೆ ಅನೇಕ ದೊಡ್ಡ ನಾಯಕರನ್ನು ಪಿಎಂ ಮೋದಿ ಹಿಂದಿಕ್ಕಿದ್ದಾರೆ. ಈ ಸಮೀಕ್ಷೆಯಲ್ಲಿ ಅಮೆರಿಕ ಅಧ್ಯಕ್ಷರು ಆರನೇ ಸ್ಥಾನದಲ್ಲಿದ್ದು, ಬ್ರಿಟನ್ ಪ್ರಧಾನಿ 13ನೇ ಸ್ಥಾನದಲ್ಲಿದ್ದಾರೆ.
ಭಾರತದ ಪ್ರಧಾನಿ ನರೇಂದ್ರ ಮೋದಿ – 71% ಮೆಕ್ಸಿಕೋದ ಅಧ್ಯಕ್ಷ ಲೋಪೆಜ್ ಒಬ್ರಡಾರ್ – 66 %
ಇಟಲಿಯ ಪ್ರಧಾನಿ ಮಾರಿಯಾ ಡ್ರಾಘಿ – 60 %, ಜಪಾನ್‌ನ ಪಿಎಂ ಫ್ಯೂಮಿಯೊ ಕಿಶಿಡಾ – 48 %, ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ – 44 %, ಯುಎಸ್ ಅಧ್ಯಕ್ಷ ಜೋ ಬಿಡೆನ್ – 43 %, ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ – 43%, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ – 41 %, ಸ್ಪ್ಯಾನಿಷ್ ಅಧ್ಯಕ್ಷ ಪೆಡ್ರೊ ಸ್ಯಾಂಚೆಜ್ – 40 %, ಕೊರಿಯಾದ ಅಧ್ಯಕ್ಷ ಮೂನ್ ಜೇ-ಇ – 40 %
ಅಮೇರಿಕನ್ ಡೇಟಾ ಗುಪ್ತಚರ ಸಂಸ್ಥೆ ದಿ ಮಾರ್ನಿಂಗ್ ಕನ್ಸಲ್ಟ್ ಪ್ರತಿ ದೇಶದ ವಯಸ್ಕರನ್ನು ಸಮೀಕ್ಷೆ ಮಾಡುವ ಮೂಲಕ ಈ ಶ್ರೇಯಾಂಕವನ್ನು ಸಿದ್ಧಪಡಿಸುತ್ತದೆ. ಕಳೆದ ನವೆಂಬರ್‌ ನಲ್ಲಿ ನಡೆದ ಸಮೀಕ್ಷೆಯಲ್ಲೂ ಪ್ರಧಾನಿ ಮೋದಿಯವರ ಜನಪ್ರಿಯತೆ ಅತ್ಯಧಿಕವಾಗಿತ್ತು. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: