
ಕರ್ನಾಟಕಪ್ರಮುಖ ಸುದ್ದಿ
ಆಸ್ಪತ್ರೆಗೆ ಸೇರುವವರ ಸಂಖ್ಯೆ ಹೆಚ್ಚಾದಲ್ಲಿ ಮತ್ತೆ ಕಠಿಣ ಕ್ರಮ ; ಆರೋಗ್ಯ ಸಚಿವ ಡಾ.ಸುಧಾಕರ್
ರಾಜ್ಯ(ಬೆಂಗಳೂರು),ಜ.22 :- ದೊಡ್ಡ ಮಟ್ಟದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ, ಸೋಂಕಿನ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.
ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಆರೋಗ್ಯ ಸಚಿವ ಡಾ.ಸುಧಾಕರ್ ಮಾತನಾಡಿ, ಸರ್ಕಾರ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ವೀಕೆಂಡ್ ಕರ್ಫ್ಯೂ ರದ್ದು ಮಾಡಿದೆ. ಆದರೆ ಜನರು ತಮ್ಮ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು. ಸೋಂಕು ಹೀಗೆ ಮಿತಿ ಮೀರಿದರೆ ಸರ್ಕಾರಕ್ಕೆ ಬೇರೆ ದಾರಿ ಇಲ್ಲ, ಆಸ್ಪತ್ರೆಗೆ ಸೇರುವವರ ಸಂಖ್ಯೆ ಹೆಚ್ಚಾದರೆ ಮತ್ತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇನ್ನೂ ದೊಡ್ಡ ಮಟ್ಟದಲ್ಲಿ ಕೇಸ್ ಗಳ ಸಂಖ್ಯೆ ಹೆಚ್ಚಾಗುತ್ತಾ ಇದೆ. ಆದರೆ ಆಸ್ಪತ್ರೆಗೆ ಸೇರುವವರ ಸಂಖ್ಯೆ ಕಡಿಮೆ ಇದೆ. ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ, ಸದ್ಯ ಸಭೆ ಸಮಾರಂಭ ಅವಶ್ಯಕತೆಗೆ ಅನುಸಾರ ಮುಂದೂಡಿ. ರೋಗ ಲಕ್ಷಣಗಳು ಇದ್ದರೆ ಮಾತ್ರ ಟೆಸ್ಟ್ ಮಾಡಿಸಿ. ಇಲ್ಲದಿದ್ದರೆ ಬೇಡ, ಅನಗತ್ಯವಾಗಿ ಟೆಸ್ಟ್ ಮಾಡಿಸುವುದು ಬೇಡ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.(ಎಸ್.ಎಂ)