ಕರ್ನಾಟಕಪ್ರಮುಖ ಸುದ್ದಿ

ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ.ಪಾಟೀಲ್ ನೇಮಕ

ರಾಜ್ಯ(ಬೆಂಗಳೂರು),ಜ.25 :- ಕರ್ನಾಟಕ ರಾಜ್ಯ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.

ವಿಧಾನಸಭಾ ಚುನಾವಣೆಗೆ ಇನ್ನೂ ಒಂದೂವರೆ ವರ್ಷ ಬಾಕಿ ಇರುವಂತೆ ಕಾಂಗ್ರೆಸ್ ಈ ನಿರ್ಧಾರ ಕೈಗೊಂಡಿದ್ದು ಕಾಂಗ್ರೆಸ್ ಚುನಾವಣಾ ಕಣಕ್ಕೆ ಭರ್ಜರಿ ಉತ್ಸಾಹದಲ್ಲಿ ಪೈಪೋಟಿಗೆ ಮುನ್ನುಗ್ಗುವಂತೆ ಕಂಡಿದೆ. ಎಂ.ಬಿ.ಪಾಟೀಲ್ ಈ ಹಿಂದೆ ಸಿದ್ದರಾಮಯ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಜಲಸಂಪನ್ಮೂಲ ಸಚಿವರಾಗಿ ಕೆಲಸ ಮಾಡಿದ್ದರು. ಹೆಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಗೃಹ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ತಮ್ಮ 27 ನೇ ವಯಸ್ಸಿಗೆ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದ ಎಂ.ಬಿ.ಪಾಟೀಲ್ ಮುಂದೆ ಲೋಕಸಭೆ ಸದಸ್ಯರಾಗಿಯೂ ಆಯ್ಕೆ ಆಗಿದ್ದರು.(ಎಸ್.ಎಂ)

Leave a Reply

comments

Related Articles

error: