
ಕರ್ನಾಟಕಪ್ರಮುಖ ಸುದ್ದಿ
ಕಾಂಗ್ರೆಸ್ ಪಕ್ಷದಲ್ಲೇ ಅಭದ್ರತೆ ಕಾಡುತ್ತಿದೆ : ನಮ್ಮ ಪಕ್ಷದಿಂದ ಯಾರು ಹೊರ ಹೋಗುವ ಪ್ರಶ್ನೆಯೇ ಇಲ್ಲ ; ಸಿಎಂ ಬೊಮ್ಮಾಯಿ
ರಾಜ್ಯ(ಬೆಂಗಳೂರು),ಜ.25 : – ಕಾಂಗ್ರೆಸ್ ಪಕ್ಷದಲ್ಲೇ ಅಭದ್ರತೆ ಕಾಡುತ್ತಿದೆ, ಕಾಂಗ್ರೆಸ್ ನಿಂದ ನಮ್ಮ ಪಕ್ಷಕ್ಕೆ ಬರುತ್ತಾರೆ ಹೊರತು ನಮ್ಮ ಪಕ್ಷದಿಂದ ಯಾರು ಹೊರ ಹೋಗುವ ಮಾತೆ ಇಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಇಂದು ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾತನಾಡಿ, ಬಿಜೆಪಿಯಿಂದ ಕೆಲ ಶಾಸಕರು ಕಾಂಗ್ರೆಸ್ ಗೆ ಬರುತ್ತಾರೆ ಎಂಬ ಮಾತಿಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ನಲ್ಲೇ ಅಭದ್ರತೆ ಕಾಡುತ್ತಿದೆ ಅಂತ ಗೊತ್ತಾಗುತ್ತಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸ್ಥಿತಿ ಏನಾಗುತ್ತೆ ನೀವೇ ನೋಡುತ್ತೀರ. ಬಿಜೆಪಿಯಿಂದ ಯಾರೂ ಕಾಂಗ್ರೆಸ್ ಗೆ ಹೋಗುವ ಪ್ರಶ್ನೆಯೇ ಇಲ್ಲ, ಕಾಂಗ್ರೆಸ್ ಬೇಡ ಅಂತ ಬಂದವರು ಆ ಕಡೆ ಮತ್ತೆ ಹೋಗುವುದಿಲ್ಲ. ಕೆಲ ದಿನಗಳಲ್ಲಿ ಬಿಜೆಪಿ ಯಾವ ರೀತಿ ಬಲವರ್ಧನೆ ಆಗುತ್ತೆ ಅಂತ ನೋಡುತ್ತೀರಿ ಎಂದು ಹೇಳಿದ್ದಾರೆ.
ಇದೇ ವೇಳೆ ನಿನ್ನೆ ಜಿಲ್ಲಾ ಉಸ್ತುವಾರಿಗಳ ನೇಮಕ ಮಾಡಿರುವುದರ ಬಗ್ಗೆ ಮಾತನಾಡಿದ್ದು, ಜಿಲ್ಲಾ ಉಸ್ತುವಾರಿಗಳಾಗಿ ನೇಮಕ ಮಾಡಿರುವುದರಲ್ಲಿ ಯಾರಲ್ಲೂ ಅಸಮಾಧಾನವಿಲ್ಲ. ನಾನು ಎಲ್ಲರ ಜತೆಯಲ್ಲೂ ಮಾತನಾಡಿದ್ದೇನೆ, ನಮ್ಮ ಪಕ್ಷದ ರಾಷ್ಟ್ರೀಯ ನೀತಿ ಆ ಜಿಲ್ಲೆಯನ್ನು ಬಿಟ್ಟು ಬೇರೆ ಕಡೆ ಹಾಕಬೇಕು ಎಂದು ಇದೆ. ಅದರಂತೆ ನಾವು ಹೆಜ್ಜೆ ಇಟ್ಟಿದ್ದೇವೆ, ನಮ್ಮ ಪಕ್ಷದಲ್ಲಿ ಒಗ್ಗಟ್ಟಿದೆ, ನಾವು ಜನರ ಪರವಾಗಿ ಸರ್ಕಾರವನ್ನು ನಡೆಸುವಲ್ಲಿ ಶ್ರಮಿಸುತ್ತೇವೆ ಎಂದು ಹೇಳಿದ್ದಾರೆ.(ಎಸ್.ಎಂ)