ಮೈಸೂರು

ಕಡ್ಡಾಯ ಮತದಾನ ಮಾಡಿದವರಿಗೆ ಮಾತ್ರ ಸರ್ಕಾರದ ಸೌಲಭ್ಯ ಸಿಗುವಂತಾಗಬೇಕು : ಡಾ. ಎಂ.ಶಾರದಾ

ಮೈಸೂರು, ಜ.25:- ಶ್ರೀ ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗ ವತಿಯಿಂದ 12ನೇ ರಾಷ್ಟ್ರೀಯ ಮತದಾರರ ದಿನ ಹಾಗೂ ಪರಾಕ್ರಮ ದಿನಸವನ್ನು ವಿಶೇಷವಾಗಿ ವಿದ್ಯಾರ್ಥಿಗಳಿಂದ ವಿಚಾರವನ್ನು ಮಂಡಿಸುವ ಮೂಲಕ ಇಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಶಾರದ ಅವರು ಮಾತನಾಡಿ, ಭಾರತ ಚುನಾವಣಾ ಆಯೋಗವು 2011ರಿಂದ ಪ್ರತಿ ವರ್ಷ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸುತ್ತಿದ್ದು, ಮತದಾರರಲ್ಲಿ ಜಾಗೃತಿ ಮೂಡಿಸುವುದು ಮತ್ತು ಕಡ್ಡಾಯವಾಗಿ ಮತದಾನ ಮಾಡಿದವರಿಗೆ ಮಾತ್ರ ಸರ್ಕಾರದ ಎಲ್ಲಾ ಸೌಲಭ್ಯಗಳು ಸಿಗುವಂತಾಗಬೇಕು. ನಗರ ಪ್ರದೇಶದ ಅಕ್ಷರಸ್ಥ ಜನರು ಮತದಾನದಲ್ಲಿ ಭಾಗವಹಿಸುವುದು ಇತ್ತೀಚೆಗೆ ತುಂಬಾ ಕಡಿಮೆಯಾಗುತ್ತಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿಬೇಕಾದರೆ ಪ್ರತಿಯೊಬ್ಬ ಪ್ರಜೆಯು ಯಾವುದೇ ಆಮಿಷಗಳಿಗೆ ಒಳಗಾಗದೆ ಮತದಾನ ಮಾಡುವ ಮೂಲಕ ಉತ್ತಮ ಪ್ರತಿನಿಧಿಗಳನ್ನು ಆಯ್ಕೆಮಾಡಬೇಕು. ದೇಶವನ್ನಾಳುವ ರಾಜಕೀಯ ನಾಯಕರಿಗೆ ನಿರ್ದಿಷ್ಟವಾದ ವಿದ್ಯಾರ್ಹತೆ ಮತ್ತು ನಿವೃತ್ತಿ ವಯಸ್ಸು ಇರಬೇಕೆಂದು ತಿಳಿಸಿದರು.

ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪೂರ್ಣಿಮಾ ಹೆಚ್.ಎ.ಅವರು ವಿದ್ಯಾರ್ಥಿಗಳಿಗೆ ಮತದಾರರ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಪ್ರಥಮ ಬಿ.ಕಾಂ. ವಿದ್ಯಾರ್ಥಿನಿಯಾದ ಅಪೂರ್ವ ಬಿ.ಎಂ. ಅವರು ಮತದಾನದ ಮಹತ್ವದ ಬಗ್ಗೆ ವಿಚಾರ ಮಂಡನೆ ಮಾಡಿದರು. ಅನುಷಾ ಅವರು ಸುಭಾಷ್ ಚಂದ್ರಬೋಸ್ ರವರ ಜೀವನ ಚರಿತ್ರೆಯ ಬಗ್ಗೆ ತಿಳಿಸಿದರು.
ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಎನ್.ಜಿ. ಲೋಕೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು
ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಎನ್.ಜಿ. ಲೋಕೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು,ಅಧ್ಯಾಪಕರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಕೃತಿಕಾ ಪ್ರಾರ್ಥಿಸಿದರು,ವಿವರ್ಶರವರು ಸ್ವಾಗತಿಸಿದರು, ಸೌಮ್ಯಶ್ರೀ ವಂದಿಸಿದರು ಅಪೂರ್ವ ಎನ್ ಕಾರ್ಯಕ್ರಮವನ್ನು ನಿರೂಪಿಸಿದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: