
Uncategorized
ಹೆಣ್ಣು ಮಗುವಿಗೆ ಸಮಾಜದ ತಾತ್ಸಾರ ಸಲ್ಲ :ಎಂ ಎನ್ ನವೀನ್ ಕುಮಾರ್
ಮೈಸೂರು, ಜ.25:- ವಿಶ್ವ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಅಪೂರ್ವ ಸ್ನೇಹ ಬಳಗದ ವತಿಯಿಂದ ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯ ಹೆಣ್ಣು ಮಕ್ಕಳಿಗೆ ಪುಸ್ತಕ ಹಾಗೂ ಸಿಹಿ ವಿತರಿಸಿ ವಿಶ್ವ ಹೆಣ್ಣು ಮಕ್ಕಳ ದಿನಾಚರಣೆಯ ಮಹತ್ವ ಹಾಗೂ ಜಾಗೃತಿ ಬಗ್ಗೆ ತಿಳಿಸಿದರು.
ನಂತರ ಮಾತನಾಡಿದ ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್ ಹೆಣ್ಣು ಹುಟ್ಟಿದರೆ ಹುಣ್ಣು ಅಂಟಿದಂತೆ ಎಂಬ ತಪ್ಪು ಕಲ್ಪನೆಯ ಕಾಲವೊಂದಿತ್ತು. ಸದ್ಯದ ಪರಿಸ್ಥಿತಿಯಲ್ಲಿ ಹೆಣ್ಣು ಕುಟುಂಬದ ಕಣ್ಣು ಎಂಬ ಪರಿಕಲ್ಪನೆ ಆರಂಭಗೊಂಡಿದೆ. ಹೆಣ್ಣು ಮಗುವಿನ ಸುರಕ್ಷತೆ, ಶಿಕ್ಷಣಕ್ಕೆ ಆದ್ಯತೆ ನೀಡಬೇಕು’ ಎಂದು ಸಲಹೆ ನೀಡಿದರು.
ಹೆಣ್ಣು ಮಗು ಜನಿಸಿದೆ ಎಂಬ ಕೀಳರಿಮೆಗೆ ಕುಟುಂಬ ಸದಸ್ಯರು ಒಳಗಾಗಬಾರದು. ಹೆಣ್ಣು ಮಕ್ಕಳಿಗೆ ಸಿಗುತ್ತಿರುವ ಸ್ಥಾನಮಾನ, ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಳ್ಳಬೇಕು. ಕಾನೂನು ಅರಿವು ಪಡೆದುಕೊಳ್ಳಿ’
ಮಹಿಳೆಯರ ಹಿತರಕ್ಷಣೆ ಹಾಗೂ ಏಳಿಗೆಗಾಗಿ ಇರುವ ಕಾನೂನು ಸೌಲತ್ತುಗಳ ಕುರಿತು ಜಾಗೃತಿ ಅಗತ್ಯ’
‘ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ನೀಡಲಾಗುತ್ತಿದೆ. ಗರ್ಭಿಣಿಯರು, ಬಾಣಂತಿಯರು ಹಾಗೂ ಅಪೌಷ್ಟಿಕ ಮಕ್ಕಳ ಆರೋಗ್ಯ ರಕ್ಷಣೆಗೆ ಹೆಚ್ಚು ಒತ್ತು ನೀಡಬೇಕು. ಶಿಕ್ಷಣ, ಆರೋಗ್ಯ, ಸಮಾನತೆ ಮತ್ತು ಹೆಣ್ಣು ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ’ ಎಂದರು.
‘ಹೆಣ್ಣು ಭ್ರೂಣ ಹತ್ಯೆ, ಲಿಂಗ ಸಮಾನತೆ ಮತ್ತು ದೈಹಿಕ ದೌರ್ಜನ್ಯದಂಥ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಗುರಿ ಹೊಂದಲಾಗಿದೆ. ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ಅವರ ಶಿಕ್ಷಣ, ಆರೋಗ್ಯ, ಹಕ್ಕುಗಳು ಮತ್ತು ಪೋಷಣೆಯ ಪ್ರಾಮುಖ್ಯತೆ ಕುರಿತು ಅರಿವು ಮೂಡಿಸುವ ಪಯತ್ನ ಮಾಡಲಾಗುತ್ತಿದೆ’ ಎಂದರು.
ಬಾಲ್ಯ ವಿವಾಹ, ವರದಕ್ಷಿಣೆ ಕಿರುಕುಳ, ಬಡತನ, ಅನಕ್ಷರತೆ ಮತ್ತು ಹೆಣ್ಣಿನ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಲು ಹೆಣ್ಣು ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕು’ ಎಂದರು.
ಇದೇ ಸಂದರ್ಭದಲ್ಲಿ ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್ ,ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ ,ಗೋಲ್ಡ್ ಸುರೇಶ್ ,ವಿನಯ್ ಕಣಗಾಲ್ ,ಶಾಲೆಯ ಮುಖ್ಯ ಶಿಕ್ಷಕರಾದ ಸುಗುಣವತಿ ಮತ್ತಿತರರು ಉಪಸ್ಥಿತರಿದ್ದರು.