ಮೈಸೂರು

ರಸ್ತೆ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಸಾವು

ಮೈಸೂರು,ಫೆ.2:- ನಿನ್ನೆ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹಾಸನದ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ ಎರಡನೇ ವರ್ಷದ ವಿದ್ಯಾರ್ಥಿಗಳಾದ ಮೌಳೇಶ್ವರ ರೆಡ್ಡಿ, ಸುಹಾನ್, ತೇಜಸ್ ಹಾಗೂ ಶುಭಂಕರ ಕಾರಿನಲ್ಲಿ ಮೈಸೂರಿನ ಕಡೆಗೆ ಬರುತ್ತಿದ್ದಾಗ, ಟ್ರಕ್ ಮುಖಾಮುಖಿ ಡಿಕ್ಕಿಯಾಗಿದೆ. ನಿನ್ನೆ ರಾತ್ರಿ 12.20 ಸುಮಾರಿಗೆ ಇಲ್ಲಿನ ರಾಮೇನಹಳ್ಳಿ ಬಳಿ ಘಟನೆ.
ಈ ವೇಳೆ ಕಾರಿನಲ್ಲಿದ್ದ ಮೌಳೇಶ್ವರ ರೆಡ್ಡಿ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬ ವಿದ್ಯಾರ್ಥಿ ತೇಜಸ್ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಗಳು ಮೂಲತಃ ಕೋಲಾರ, ಶಿವಮೊಗ್ಗ, ಬೆಂಗಳೂರು ಹಾಗೂ ಅರಸಿಕೆರೆಗೆ ಸೇರಿದವರಾಗಿದ್ದು, ಕಾಲೇಜು ಸಹಪಾಠಿಗಳು ಎನ್ನಲಾಗಿದೆ.
ಮೃತ ವಿದ್ಯಾರ್ಥಿಗಳ ದೇಹವನ್ನು ಕೆ.ಆರ್.ಆಸ್ಪತ್ರೆಗೆ ಕಳುಹಿಸಲಾಗಿದೆ. ಗಾಯಗೊಂಡ ಇನ್ನಿಬ್ಬರು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಮೈಸೂರಿನ ಡಿ.ಆರ್.ಎಂ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಿಳಿಕೆರೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಶಿವಮಂಜ ಅವರು ಮಾಹಿತಿ ನೀಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: