ಕರ್ನಾಟಕಪ್ರಮುಖ ಸುದ್ದಿ

ವಸತಿ ನಿಲಯದಲ್ಲಿ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥ ; ಸರಿಯಾಗಿ ಊಟ ಕೊಡುವುದಿಲ್ಲ ಎಂಬ ಆರೋಪ

ರಾಜ್ಯ(ಬೆಳಗಾವಿ),ಫೆ.9 : – ವಸತಿ ನಿಲಯದ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಬೆಳಗಾವಿಯ ರಾಮದುರ್ಗ ಪಟ್ಟಣದಲ್ಲಿರುವ ವಸತಿ ನಿಲಯದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ಶಾಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಈ ಪೈಕಿ 10 ವಿದ್ಯಾರ್ಥಿನಿಯರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ, ಹಾಗೂ ನಾಲ್ವರು ವಿದ್ಯಾರ್ಥಿನಿಯರನ್ನು ಪಟ್ಟಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವಿದ್ಯಾರ್ಥಿನಿಯರು ಚೇತರಿಸಿಕೊಂಡಿದ್ದಾರೆ ಎಂದು ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.

ಸದ್ಯ ಘಟನೆ ಬಳಿಕ ವಸತಿ ನಿಲಯದಲ್ಲಿ ಊಟದ ಅವ್ಯವಸ್ಥೆಯ ಬಗ್ಗೆ ತಿಳಿದು ಬಂದಿದ್ದು ವಸತಿ ನಿಲಯದಲ್ಲಿ ಊಟ ಸರಿಯಾಗಿ ಕೊಡಲ್ಲ ಎಂದು ವಿದ್ಯಾರ್ಥಿನಿಯರು ಆರೋಪ ಮಾಡಿದ್ದಾರೆ.(ಎಸ್.ಎಂ)

Leave a Reply

comments

Related Articles

error: