ಕರ್ನಾಟಕಪ್ರಮುಖ ಸುದ್ದಿ

ಉರುಳಿ ಬಿದ್ದ ಬಸ್ : 15 ಪ್ರಯಾಣಿಕರು ಗಂಭೀರ ಗಾಯ

ರಾಜ್ಯ(ಕೊಪ್ಪಳ) ಮೇ.9:- ಸ್ಟೇರಿಂಗ್ ಕಟ್ ಆದ ಪರಿಣಾಮ ರಾಜ್ಯ  ಸರ್ಕಾರಿ ಸಂಸ್ಥೆಗೆ ಸೇರಿದ ಬಸ್ಸೊಂದು ಉರುಳಿ ಬಿದ್ದ ಪರಿಣಾಮ  15 ಪ್ರಯಾಣಿಕರು ಗಾಯಗೊಂಡು, ಮೂವರ ಸ್ಥಿತಿ ಗಂಭೀರವಾಗಿರುವ  ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ನಡೆದಿದೆ.

ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಬಳಿ ಬಸ್ ಉರುಳಿ ಬಿದ್ದಿದೆ. ತಾವರಗೇರಾದಿಂದ ಕುಷ್ಟಗಿ ಕಡೆಗೆ ಹೊರಟಿದ್ದ ಬಸ್ ನಲ್ಲಿ ಸುಮಾರು 30 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ದೋಟಿಹಾಳ ಗ್ರಾಮದ ಬಳಿ ಬಸ್ ಬರುತ್ತಿದ್ದಂತೆ ಸ್ಟೇರಿಂಗ್ ಕಟ್ ಆಗಿ ಬುಡಮೇಲಾಗಿ ಬಿದ್ದಿದೆ. ಮೂವರು ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯಿಂದ ಕೆಲ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಕುಷ್ಟಗಿ ಸರ್ಕಾರಿ ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಕುಷ್ಟಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. – (ವರದಿ: ಕೆ.ಎಸ್,ಎಸ್.ಎಚ್)

Leave a Reply

comments

Related Articles

error: