
ಕ್ರೀಡೆದೇಶಪ್ರಮುಖ ಸುದ್ದಿ
ಇಂದು ಭಾರತ-ಶ್ರೀಲಂಕಾ ನಡುವೆ ಮೊದಲ ಟಿ 20 ಪಂದ್ಯ
ದೇಶ(ನವದೆಹಲಿ),ಫೆ.24:- ಏಕದಿನ ಹಾಗೂ ಟಿ20ಯಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಕ್ಲೀನ್ ಸ್ವೀಪ್ ಮಾಡಿದ ಬಳಿಕ ಇದೀಗ ಭಾರತ ಕ್ರಿಕೆಟ್ ತಂಡ ಶ್ರೀಲಂಕಾವನ್ನು ಎದುರಿಸಲಿದೆ. ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯಲಿದೆ.
ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಸಂಜು ಸ್ಯಾಮ್ಸನ್, ರಿತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ ಮತ್ತು ಆವೇಶ್ ಖಾನ್ ಅವರಂತಹ ಆಟಗಾರರು ವರ್ಷಾಂತ್ಯದಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಗೆ ಮುಂಚಿತವಾಗಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಲು ಉತ್ತಮ ಅವಕಾಶವನ್ನು ಹೊಂದಿದ್ದಾರೆ.
ಅದೇ ಸಮಯದಲ್ಲಿ ಸ್ಪಿನ್ ಆಲ್ರೌಂಡರ್ ರವೀಂದ್ರ ಜಡೇಜಾ ಕೂಡ ಈ ಸರಣಿಯಿಂದ ತಂಡಕ್ಕೆ ಮರಳುತ್ತಿದ್ದಾರೆ. ಆದರೆ ಈ ಸರಣಿಯಲ್ಲಿ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶಾರ್ದೂಲ್ ಠಾಕೂರ್ ಮತ್ತು ರಿಷಬ್ ಪಂತ್ ಟೀಂ ಇಂಡಿಯಾದ ಭಾಗವಾಗಿಲ್ಲ.
ಭಾರತದ ವಿರುದ್ಧದ ಪಂದ್ಯದ ಮೊದಲು ಮಿಸ್ಟ್ರಿ ಸ್ಪಿನ್ನರ್ ಮತ್ತು ಹ್ಯಾಂಡಿ ಬ್ಯಾಟ್ಸ್ಮನ್ ವಾನಿಂದು ಹಸರಂಗ ಮತ್ತೊಮ್ಮೆ ಕೊರೋನಾ ಪಾಸಿಟಿವ್ ಆಗಿದ್ದು, ಶ್ರೀಲಂಕಾ ತಂಡವು ಭಾರೀ ಹಿನ್ನಡೆ ಅನುಭವಿಸಿತು. ಇದರಿಂದಾಗಿ ಅವರು ಟಿ20 ಸರಣಿಯಿಂದ ಹೊರಗುಳಿದಿದ್ದರು. ಈಗ ಎಡಗೈ ಸ್ಪಿನ್ನರ್ ಪ್ರವೀಣ್ ಜಯವಿಕ್ರಮ ಮತ್ತು ಲೆಗ್ ಸ್ಪಿನ್ನರ್ ಜೆಫ್ರಿ ವಾಂಡರ್ಸೆಗೆ ಅವಕಾಶ ಸಿಗುವ ನಿರೀಕ್ಷೆಯಿದೆ.
ಭಾರತದ ಸಂಭಾವ್ಯ ಪ್ಲೇಯಿಂಗ್ 11 – ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ದೀಪಕ್ ಹೂಡಾ, ವೆಂಕಟೇಶ್ ಅಯ್ಯರ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಾಹಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್ ಮತ್ತು ಜಸ್ಪ್ರೀತ್ ಬುಮ್ರಾ.
ಶ್ರೀಲಂಕಾದ ಸಂಭಾವ್ಯ ಪ್ಲೇಯಿಂಗ್ 11- ಪಾತುಮ್ ನಿಸಂಕ, ದನುಷ್ಕಾ ಗುಣತಿಲಕ, ಕಾಮಿಲ್ ಮಿಶಾರಾ, (WK), ದಿನೇಶ್ ಚಾಂಡಿಮಲ್, ಚರಿತ್ ಅಸ್ಲಂಕಾ, ಸಾಸುನ್ ಶಾನಾಕ (ನಾಯಕ), ಚಮಿಕಾ ಕರುಣಾರತ್ನೆ, ಜೆಫ್ರಿ ವಾಂಡರ್ಸೆ, ಪ್ರವೀಣ್ ಜಯವಿಕ್ರಮ, ದುಷ್ಮಂತ ಚಮೀರಾ ಮತ್ತು ಲಾಹಿರು ಕುಮಾರಾ ಇದ್ದಾರೆ. (ಏಜೆನ್ಸೀಸ್,ಎಸ್.ಎಚ್)