
ಕ್ರೀಡೆದೇಶಪ್ರಮುಖ ಸುದ್ದಿ
IND vs SL: ಶ್ರೀಲಂಕಾವನ್ನು ಮೊದಲ ಟಿ20 ನಲ್ಲಿ 62 ರನ್ ಗಳಿಂದ ಸೋಲಿಸಿದ ಟೀಂ ಇಂಡಿಯಾ
ದೇಶ(ನವದೆಹಲಿ),ಫೆ.25:- ಲಕ್ನೋದ ಇಕಾನಾ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ 62 ರನ್ ಗಳಿಂದ ಶ್ರೀಲಂಕಾವನ್ನು ಸೋಲಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 1-0 ಮುನ್ನಡೆ ಸಾಧಿಸಿದೆ. ಮೊದಲು ಆಡಿದ ಭಾರತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಶ್ರೀಲಂಕಾ ತಂಡ ನಿಗದಿತ ಓವರ್ ಗಳಲ್ಲಿ ಆರು ವಿಕೆಟ್ಗೆ 137 ರನ್ ಗಳಿಸಲಷ್ಟೇ ಶಕ್ತವಾಯಿತು.
ಭಾರತದ ಪರ ಬ್ಯಾಟಿಂಗ್ ನಲ್ಲಿ ಇಶಾನ್ ಕಿಶನ್ ಅತ್ಯಧಿಕ 89 ರನ್ ಹಾಗೂ ಶ್ರೇಯಸ್ ಅಯ್ಯರ್ ಔಟಾಗದೆ 57 ರನ್ ಗಳಿಸಿದರು. ಬೌಲಿಂಗ್ ನಲ್ಲಿ ಭುವನೇಶ್ವರ್ ಕುಮಾರ್ ಮತ್ತು ವೆಂಕಟೇಶ್ ಅಯ್ಯರ್ ತಲಾ ಎರಡು ವಿಕೆಟ್ ಪಡೆದರು. ಅದೇ ಸಮಯದಲ್ಲಿ ಶ್ರೀಲಂಕಾ ಪರವಾಗಿ ಚರಿತ್ ಅಸಲಂಕಾ ಅಜೇಯ 53 ರನ್ ಗಳಿಸಿದರು, ಆದರೆ ಅವರು ತಮ್ಮ ತಂಡವನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ. (ಏಜೆನ್ಸೀಸ್,ಎಸ್.ಎಚ್)