ಕರ್ನಾಟಕಪ್ರಮುಖ ಸುದ್ದಿ

ಮಾ.03 ರಂದು ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ರಾಜ್ಯ(ಮಡಿಕೇರಿ) ಮಾ.3:- ಸಂಜೀವಿನಿ-ಕೆಎಸ್‍ಆರ್‍ಎಲ್‍ಪಿಎಸ್ ಸಂಸ್ಥೆಯು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಟ್ರೈಫೆಡ್ ಸಹಯೋಗದೊಂದಿಗೆ ರಾಜ್ಯದಲ್ಲಿ ವನ ಧನ ವಿಕಾಸ ಕೇಂದ್ರಗಳನ್ನು ಸ್ಥಾಪಿಸುವ ಸಲುವಾಗಿ ಹಾಗೂ ಕ್ಷೇತ್ರ ಮಟ್ಟದಲ್ಲಿ ಪರಿಣಾಮಕಾರಿ ಅನುಷ್ಠಾನಕ್ಕೆ ಮತ್ತು ಸಂಸ್ಥೆಯ ಸಿಬ್ಬಂದಿಗಳ ಸಾಮಥ್ರ್ಯ ಬಲವರ್ಧನೆಗಾಗಿ ಮಾರ್ಚ್, 03 ರಿಂದ 05 ರವರೆಗೆ ರಾಜ್ಯ ಮಟ್ಟದ ತರಬೇತಿಯು ಜಿಲ್ಲೆಯಲ್ಲಿ ಆಯೋಜಿಸಲಾಗಿದೆ.
ಈ ಸಂಬಂಧ ಕೂಡಿಗೆಯ ಯೂನಿಯನ್ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಮಾರ್ಚ್, 03 ರಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಮಟ್ಟದ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಭನ್ವರ್ ಸಿಂಗ್ ಮೀನಾ ಅವರು ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: